ನವದೆಹಲಿ: ಕಳೆದ ಕೆಲ ದಿನಗಳಿಂದ ಹಲವು ವಿಮಾನಗಳಿಗೆ ಬಾಂಬ್ ಬೆದರಿಕೆಯನ್ನು ಇಮೇಲ್, ಎಕ್ಸ್ ಮೂಲಕ ಹಾಕಲಾಗಿತ್ತು. ಇಂದು ಮತ್ತೆ ಸರಣಿ ಮುಂದುವರೆದಿದ್ದು ಹೊಸದಾಗಿ 85 ವಿಮಾನಗಳಿಗೆ ಬಾಂಬ್ ಬೆದರಿಕೆಯನ್ನು ಹಾಕಲಾಗಿದೆ.
ಇಂದು ಇಂಡಿಗೊ, ಏರ್ ಇಂಡಿಯಾ, ವಿಸ್ತಾರಾ ಮತ್ತು ಅಕಾಸಾ ಏರ್ ಸೇರಿದಂತೆ 85 ವಿಮಾನಗಳಿಗೆ ಬಾಂಬ್ ಬೆದರಿಕೆ ಹಾಕಲಾಗಿದೆ. ಹೀಗಾಗಿ ಕೆಲ ವಿಮಾನಗಳ ಸಂಚಾರದಲ್ಲೂ ವ್ಯತ್ಯಯ ಉಂಟಾಗಿದೆ. ಬಾಂಬ್ ಬೆದರಿಕೆಯಿಂದಾಗಿ ವಿಮಾನಗಳನ್ನು ಬಾಂಬ್ ನಿಷ್ಕ್ರೀಯ ದಳದವರು ತಪಾಸಣೆಗೆ ಒಳಪಡಿಸುತ್ತಿದ್ದಾರೆ.