ಬೆಂಗಳೂರು: ನಗರದ ಪ್ರತಿಷ್ಠಿತ ಕಾಲೇಜೊಂದಕ್ಕೆ ಬಾಂಬ್ ಬೆದರಿಕೆ ಸಂದೇಶವನ್ನು ಕಳುಹಿಸಲಾಗಿದೆ. ಅಲ್ಲದೇ ಪ್ರಾಂಶುಪಾಲರನ್ನು ಕೊಲೆ ಮಾಡಿ ಫ್ರಿಡ್ಜ್ ನಲ್ಲಿ ತುಂಬಿ ಇಡುತ್ತೇವೆ ಎಂಬುದಾಗಿ ಬೆದರಿಕೆ ಹಾಕಲಾಗಿದೆ.
ಬೆಂಗಳೂರಿನ ಸೋಲದೇಹವನಹಳ್ಳಿಯಲ್ಲಿರುವಂತ ಪ್ರತಿಷ್ಠಿತ ಆಚಾರ್ಯ ಕಾಲೇಜಿಗೆ ಈ ಬಾಂಬ್ ಬೆದರಿಕೆ ಸಂದೇಶ ಕಳುಹಿಸಲಾಗಿದೆ. ಕೂಡಲೇ ಸ್ಥಳೀಯ ಪೊಲೀಸರಿಗೆ ಕಾಲೇಜು ಆಡಳಿತ ಮಂಡಳಿ ಮಾಹಿತಿ ನೀಡಲಾಗಿದೆ. ಸ್ಥಳಕ್ಕೆ ಆಗಮಿಸಿದಂತ ಶ್ವಾನದಳ, ಬಾಂಬ್ ನಿಷ್ಕ್ರೀಯ ದಳದಿಂದ ಕಾಲೇಜಿನಲ್ಲಿ ಸಂಪೂರ್ಣ ತಪಾಸಣೆ ಮಾಡಲಾಗಿದೆ.
ತಪಾಸಣೆಯ ಬಳಿಕ ಇದೊಂದು ಹುಸಿ ಬಾಂಬ್ ಬೆದರಿಕೆ ಕರೆ ಎಂಬುದಾಗಿ ತಿಳಿದು ಬಂದಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವಂತ ಸೋಲದೇವನಹಳ್ಳಿ ಠಾಣೆಯ ಪೊಲೀಸರು, ಬಾಂಬ್ ಬೆದರಿಕೆ ಇ-ಮೇಲ್ ಕಳುಹಿಸಿದಂತ ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ.