ಮುಂಬೈ: ಇಲ್ಲಿನ ಅಮೇರಿಕಾ ರಾಯಭಾರ ಕಚೇರಿಗೆ ಬಾಂಬ್ ಬೆದರಿಕೆ ಕರೆ ಬಂದಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಪೊಲೀಸರು ತಪಾಸಣೆ ನಡೆಸುತ್ತಿದ್ದಾರೆ.
ಮುಂಬೈನಲ್ಲಿರುವಂತ ಅಮೇರಿಕಾ ರಾಯಭಾರ ಕಚೇರಿಗೆ ಕಚೇರಿಯನ್ನು ಸ್ಪೋಟಿಸುವುದಾಗಿ ಬಾಂಬ್ ಬೆದರಿಕೆ ಕರೆ ಮಾಡಲಾಗಿದೆ. ಈ ಕೂಡಲೇ ಪೊಲೀಸರು ಅಲರ್ಟ್ ಆಗಿದ್ದು, ಬಾಂಬ್ ನಿಷ್ಕ್ರೀಯ ದಳ, ಪತ್ತೆಯ ಶ್ವಾನ ದಳದಿಂದ ಸ್ಥಳದಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ.
ಬಾಂಬ್ ಬೆದರಿಕೆ ಕರೆ ಬಗ್ಗೆ ಮುಂಬೈನ ಬಿಕೆಸಿ ಪೊಲೀಸ್ ಠಾಣೆಗೆ ಮಾಹಿತಿ ನೀಡಲಾಗಿದೆ. ಸ್ಥಳಕ್ಕೆ ಪೊಲೀಸರು, ಶ್ವಾನದಳದಿಂದ ಭೇಟಿ ನೀಡಿ, ಬಾಂಬ್ ಪತ್ತೆ ಕಾರ್ಯದಲ್ಲಿ ತೊಡಗಿದ್ದಾರೆ.
ಜವಾಹರ ನವೋದಯ ವಿದ್ಯಾಲಯಗಳಲ್ಲಿ 6ನೇ ತರಗತಿಗೆ ಪ್ರವೇಶಕ್ಕೆ ಅರ್ಜಿ ಆಹ್ವಾನ: ಜು.29 ಲಾಸ್ಟ್ ಡೇಟ್