ಬೆಂಗಳೂರು : ನಿನ್ನೆ ಬೆಂಗಳೂರಿನ ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಇ-ಮೇಲ್ ಮುಖಾಂತರ ಬಾಂಬ್ ಬೆದರಿಕೆ ಸಂದೇಶ ರವಾನಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸಂದೇಶ ಕಳುಹಿಸಿದ ಕಿಡಿಗೇಡಿಗಳ ವಿರುದ್ಧ ಬೆಂಗಳೂರಿನ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಇಮೇಲ್ ಬೆದರಿಕೆ ಸಂದೇಶ ಕಳಿಸಿದ್ದ ಕಿಡಿಗೇಡಿಗಳ ವಿರುದ್ಧ ಇದೀಗ ಎಫ್ ಐ ಆರ್ ದಾಖಲಾಗಿದ್ದು, ನಿನ್ನೆ ಉಗ್ರಸಘಟನೆ ಎಂದು ಉಲ್ಲೇಖಿಸಿ ಬಾಂಬ್ ಬೆದರಿಕೆ ಸಂದೇಶ ಕಳುಹಿಸಲಾಗಿತ್ತು. ವಿಶ್ವೇಶ್ವರಯ್ಯ ಇಮೇಲ್ ಮೂಲಕ ಬೆದರಿಕೆ ಸಂದೇಶ ಬಂದಿತ್ತು ಹಲವು ಸ್ಪೋಟಕಗಳನ್ನು ಬಚ್ಚಿಡಲಾಗಿದೆ ಎಂದು ಇಮೇಲ್ ನಲ್ಲಿ ಮೂಲಕ ರವಾನಿಸಲಾಗಿದ್ದು ಎಲ್ಲವೂ ಸ್ಪೋಟಗೊಳಲ್ಲಿದೆ ಎಂದು ಕಿಡಿಗೇಡಿಗಳು ಮೇಲ್ನಲ್ಲಿ ಸಂದೇಶ ಕಳುಹಿಸಿದ್ದರು.
ಮೇಲ್ ಸಂದೇಶ ನೋಡಿದ ತಕ್ಷಣ ಕೂಡಲೇ ಮ್ಯೂಸಿಯಂ ಸಿಬ್ಬಂದಿ ಈ ಕುರಿದಂತೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಶ್ವೇಶ್ವರಯ್ಯ ಮ್ಯೂಸಿಯಂ ಗೆ ಪೊಲೀಸರು ಬಂದು ಸ್ಥಳ ಪರಿಶೀಲನೆ ನಡೆಸಿದ್ದಾರೆ.ಬಾಂಬ್ ನಿಷ್ಕ್ರಿಯದಳ ಶ್ವಾನದಳದಿಂದಲೂ ಪರಿಶೀಲನೆ ನಡೆಸಿದ್ದಾರೆ. ಪರಿಶೀಲನೆ ಬಳಿಕ ಹಸಿಬಾಂಬ ಬೆದರಿಕೆ ಸಂದೇಶ ಎಂಬುವುದು ಪತ್ತೆಯಾಗಿದೆ.ಈ ಘಟನೆ ಕುರಿತಂತೆ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.