ಬೆಂಗಳೂರು: ದೆಹಲಿ ಟೂರಿಸ್ಟ್ ಬಸವರಾಜ ಬೊಮ್ಮಾಯಿ ಅವರನ್ನು ಹೈಕಮಾಂಡ್ ನಾಯಕರು ಭೇಟಿ ಮಾಡಲು ಸತಾಯಿಸುತ್ತಿರುವುದು ನೋಡಿ ಆಯ್ಯೋ ಪಾಪ ಎನಿಸುತ್ತಿದೆ! ಇದುವರೆಗೂ 12 ಬಾರಿ ದೆಹಲಿ ಭೇಟಿ ಮಾಡಿದರೂ ರಾಜ್ಯಕ್ಕೆ ನಯಾಪೈಸೆ ಪ್ರಯೋಜನವಾಗಿಲ್ಲ, ಈಗಲೂ ಆಗುವುದಿಲ್ಲ. ಬೊಮ್ಮಾಯಿಯವರ ಸಂಕಟ ವಿಸ್ತರಣೆಯಾಗುತ್ತಿದೆಯೇ ಹೊರತು ಸಂಪುಟ ವಿಸ್ತರಣೆಯಲ್ಲ ಎಂಬುದಾಗಿ ಕರ್ನಾಟಕ ಕಾಂಗ್ರೆಸ್ ಹೇಳಿದೆ.
ದೆಹಲಿ ಟೂರಿಸ್ಟ್ @BSBommai ಅವರನ್ನು ಹೈಕಮಾಂಡ್ ನಾಯಕರು ಭೇಟಿ ಮಾಡಲು ಸತಾಯಿಸುತ್ತಿರುವುದು ನೋಡಿ ಆಯ್ಯೋ ಪಾಪ ಎನಿಸುತ್ತಿದೆ!
ಇದುವರೆಗೂ 12 ಬಾರಿ ದೆಹಲಿ ಭೇಟಿ ಮಾಡಿದರೂ ರಾಜ್ಯಕ್ಕೆ ನಯಾಪೈಸೆ ಪ್ರಯೋಜನವಾಗಿಲ್ಲ, ಈಗಲೂ ಆಗುವುದಿಲ್ಲ.
ಬೊಮ್ಮಾಯಿಯವರ ಸಂಕಟ ವಿಸ್ತರಣೆಯಾಗುತ್ತಿದೆಯೇ ಹೊರತು ಸಂಪುಟ ವಿಸ್ತರಣೆಯಲ್ಲ.
— Karnataka Congress (@INCKarnataka) November 29, 2022
ಈ ಬಗ್ಗೆ ಟ್ವಿಟ್ ಮಾಡಿದ್ದು, 40% ಕಮಿಷನ್ ವಸೂಲಿ ಸಾಲದೆ ರೌಡಿಗಳನ್ನು ಪಕ್ಷಕ್ಕೆ ಸೇರಿಸಿಕೊಂಡು ಹಫ್ತಾ ವಸೂಲಿಗೂ ಬಿಜೆಪಿ ತಯಾರಿ ನಡೆಸಿರುವಂತಿದೆ! ಬಿಜೆಪಿಯಲ್ಲಿ “ರೌಡಿ ಮೋರ್ಚಾ” ಎಂಬ ಹೊಸ ಘಟಕ ತೆರೆಯುವ ಲಕ್ಷಣವಿದೆ. ಸೋಲುವ ಭಯದಲ್ಲಿರುವ ಬಿಜೆಪಿ ರೌಡಿಗಳನ್ನು ಬಳಸಿ ಚುನಾವಣೆಗೆ ಸಿದ್ಧತೆ ನಡೆಸಿದೆಯೇ ಬಸವರಾಜ ಬೊಮ್ಮಾಯಿ ಅವರೇ? ಇದೇನಾ ಬಿಜೆಪಿಯ ಸಂಸ್ಕೃತಿ, ಸಂಸ್ಕಾರ? ಎಂದು ಪ್ರಶ್ನಿಸಿದೆ.
40% ಕಮಿಷನ್ ವಸೂಲಿ ಸಾಲದೆ ರೌಡಿಗಳನ್ನು ಪಕ್ಷಕ್ಕೆ ಸೇರಿಸಿಕೊಂಡು ಹಫ್ತಾ ವಸೂಲಿಗೂ @BJP4Karnataka ತಯಾರಿ ನಡೆಸಿರುವಂತಿದೆ!
ಬಿಜೆಪಿಯಲ್ಲಿ "ರೌಡಿ ಮೋರ್ಚಾ" ಎಂಬ ಹೊಸ ಘಟಕ ತೆರೆಯುವ ಲಕ್ಷಣವಿದೆ.ಸೋಲುವ ಭಯದಲ್ಲಿರುವ ಬಿಜೆಪಿ ರೌಡಿಗಳನ್ನು ಬಳಸಿ ಚುನಾವಣೆಗೆ ಸಿದ್ಧತೆ ನಡೆಸಿದೆಯೇ @BSBommai ಅವರೇ?
ಇದೇನಾ ಬಿಜೆಪಿಯ ಸಂಸ್ಕೃತಿ, ಸಂಸ್ಕಾರ?
— Karnataka Congress (@INCKarnataka) November 29, 2022
ದೆಹಲಿಯಲ್ಲಿ ಬಿಜೆಪಿ ಅಧ್ಯಕ್ಷ ನಡ್ಡಾ ಭೇಟಿ ಮಾಡುತ್ತೇನೆ ಎಂದಿದ್ದ ಬಸವರಾಜ ಬೊಮ್ಮಾಯಿ ಅವರಿಗೆ ನಡ್ಡಾ ಅಪಾಯಿಂಟ್ಮೆಂಟ್ ಕೊಡಲು ಸತಾಯಿಸುತ್ತಿರುವುದೇಕೆ? ರಾಜ್ಯದ ಸಿಎಂ ಬೊಮ್ಮಾಯಿಯವರನ್ನ ಕಂಡರೆ ಹೈಕಮಾಂಡಿಗೆ ಅಷ್ಟೊಂದು ತಾತ್ಸಾರವೇ? ಬೊಮ್ಮಾಯಿಯವರು ಅಷ್ಟು ಅಸಮರ್ಥರೆ? ಬೊಮ್ಮಾಯಿಯವರೆಂದರೆ ಬಿಜೆಪಿಯಲ್ಲಿ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಾಗಿದೆಯೇ? ಎಂದು ಕೇಳಿದೆ.
ದೆಹಲಿಯಲ್ಲಿ ಬಿಜೆಪಿ ಅಧ್ಯಕ್ಷ ನಡ್ಡಾ ಭೇಟಿ ಮಾಡುತ್ತೇನೆ ಎಂದಿದ್ದ @BSBommai ಅವರಿಗೆ ನಡ್ಡಾ ಅಪಾಯಿಂಟ್ಮೆಂಟ್ ಕೊಡಲು ಸತಾಯಿಸುತ್ತಿರುವುದೇಕೆ?
ರಾಜ್ಯದ ಸಿಎಂ ಬೊಮ್ಮಾಯಿಯವರನ್ನ ಕಂಡರೆ ಹೈಕಮಾಂಡಿಗೆ ಅಷ್ಟೊಂದು ತಾತ್ಸಾರವೇ? ಬೊಮ್ಮಾಯಿಯವರು ಅಷ್ಟು ಅಸಮರ್ಥರೆ?
ಬೊಮ್ಮಾಯಿಯವರೆಂದರೆ ಬಿಜೆಪಿಯಲ್ಲಿ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಾಗಿದೆಯೇ?
— Karnataka Congress (@INCKarnataka) November 29, 2022