ಬೆಂಗಳೂರು : ರಾಜ್ಯದಲ್ಲಿ ಅಪರಾಧ ಕೃತ್ಯಗಳು ಹೆಚ್ಚುತ್ತಿರುವ ಬೆನ್ನಲ್ಲೇ ಅಪರಾಧ ಕೃತ್ಯಗಳನ್ನು ನಿಯಂತ್ರಿಸುವಂತೆ ಪೊಲೀಸರಿಗೆ ಸಿಎಂ ಬಸವರಾಜ ಬೊಮ್ಮಾಯಿ ಖಡಕ್ ಸೂಚನೆ ನೀಡಿದ್ದಾರೆ.
ಈ ಸಂಬಂಧ ರಾಜ್ಯದ ಎಲ್ಲಾ ಐಜಿ, ಎಸ್ ಪಿ ಹಾಗೂ ಪೊಲೀಸ್ ಆಯುಕ್ತರೊಂದಿಗೆ ವಿಡಿಯೋ ಕಾನ್ಪರೆನ್ಸ್ ಮೂಲಕ ಸಭೆ ನಡೆಸಿ ಮಾತನಾಡಿದರು.
ಕಾನೂನು ಸುವ್ಯವಸ್ಥೆಗೆ ಯಾವ ರೀತಿ ಕೂಡ ಭಂಗವಾಗಬಾರದು. ಶಾಂತಿ ಕಾಪಾಡುವ ಕುರಿತು ಸಭೆಯಲ್ಲಿ ಸಮಾಲೋಚನೆ ನಡೆಸಲಾಗಿದೆ. ಶಾಂತಿ ಸೌಹಾರ್ದತೆ ಧಕ್ಕೆ ತರುವವರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಬೇಕೆಂದು ಎಚ್ಚರಿಕೆ ನೀಡಿದರು. ಡಿ.ಜಿ ಮತ್ತು ಐಜಿಪಿ ಪ್ರವೀಣ್ ಸೂದ್ ಪೊಲೀಸರಿಗೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಖಡಕ್ ಸೂಚನೆ ನೀಡಿದ್ದಾರೆ.