ಮಂಗಳೂರು : ತಂದೆಯೊಂದಿಗೆ ಜಗಳವಾಡಿದಂತ ಬಾಲಕನೊಬ್ಬ, ಸಿಟ್ಟಿನಲ್ಲಿ ಚಾಕುವಿನಿಂದ ಇರಿದು ಗಂಭೀರವಾಗಿ ಗಾಯಗೊಳಿಸಿದ್ದಾನೆ. ಆ ಬಳಿಕ ಮನೆಯಲ್ಲಿದ್ದಂತ ಕೋವಿಯಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ಉಪ್ಪಿನಂಗಡಿ ಸಮೀಪದ ರಾಮಕುಂಜ ಗ್ರಾಮದ ಪಾದೆಯಲ್ಲಿ ನಡೆದಿದೆ.
ಮಂಗಳೂರಿನ ಉಪ್ಪಿನಂಗಡಿ ಸಮೀಪದ ರಾಮಕುಂಜ ಗ್ರಾಮದ ಪಾದೆ ಎಂಬಲ್ಲಿ ತಂದೆ ವಸಂತ ಅಮೀನ್ ಹಾಗೂ ಬಾಲಕ ಮೋಕ್ಷ ನಡುವೆ ಜಗಳ ಉಂಟಾಗಿದೆ. ಈ ಜಗಳ ತಾರಕಕ್ಕೇರಿದಂತ ಸಂದರ್ಭದಲ್ಲಿ ತಂದೆ ವಸಂತ ಅಮೀನ್ ಅವರಿಗೆ ಬಾಲಕ ಮೋಕ್ಷ ಚಾಕುವಿನಿಂದ ಇರಿದು ಗಾಯಗೊಳಿಸಿದ್ದಾರೆ. ಪುತ್ರನ ಚಾಕು ಇರಿತಕ್ಕೆ ಒಳಗಾದಂತ ತಂದೆ ವಸಂತ ಅಮೀನ್ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಮಂಗಳೂರಿನ ಎ.ಜೆ ಆಸ್ಪತ್ರೆದೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
ತಂದೆ ವಸಂತ ಅಮೀನ್ ಸಾವು ಬದುಕಿನ ನಡುವೆ ಹೋರಾಡುತ್ತಿರುವ ವಿಷಯ ತಿಳಿದಂತ ಅವರ ಪುತ್ರ ಬಾಲಕ ಮೋಕ್ಷ, ಮನೆಯಲ್ಲಿದ್ದಂತ ಕೋವಿಯಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ತಂದೆ-ಪುತ್ರನ ನಡುವೆ ಯಾವ ವಿಷಯಕ್ಕೆ ಜಗಳವಾಗಿದೆ ಎನ್ನುವ ವಿಚಾರ ಪೊಲೀಸರ ತನಿಖೆಯಿಂದ ತಿಳಿದು ಬರಬೇಕಿದೆ.
ಅಂದಹಾಗೇ ಕೇರಳ ಮೂಲದವರಾಗಿದ್ದಂತ ವಸಂತ ಅಮೀನ್ ಅವರು ರಾಮಕುಂಜ ಪಾದೆಯಲ್ಲಿ ಜಮೀನು ಜಾಗ ಖರೀದಿಸಿ ಮನೆ ನಿರ್ಮಿಸಿಕೊಂಡು ಪುತ್ರನೊಂದಿಗೆ ವಾಸವಿದ್ದರು. ಮೃತ ಬಾಲಕ ಮೋಕ್ಷ ಮಂಗಳೂರಿನ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದುದ್ದಾಗಿ ತಿಳಿದು ಬಂದಿದೆ.
ರಾಜ್ಯದಲ್ಲಿ ಜೈಲುಗಳ ಕೈದಿಗಳಿಗೆ ಖಾಸಗಿ ವ್ಯಾಕ್ತಿಗಳಿಂದ ಆಹಾರ ಪೂರೈಕೆಗೆ ಬ್ರೇಕ್: ಕಾರಾಗೃಹ ಡಿಜಿಪಿ ಆದೇಶ
ಇನ್ಮುಂದೆ ಸರ್ಕಾರಿ ಅಧಿಕಾರಿಗಳು ‘ಜನಪ್ರತಿನಿಧಿ’ಗಳ ಪೋನ್ ಕಾಲ್ ಸ್ವೀಕರಿಸಲೇಬೇಕು: ರಾಜ್ಯ ಸರ್ಕಾರ ಖಡಕ್ ಆದೇಶ








