ದೊಡ್ಡಬಳ್ಳಾಪುರ: ಇಲ್ಲಿನ ಕೆಸ್ತೂರು ಗೇಟ್ ಬಳಿಯಲ್ಲಿ ಬೈಕ್ ಗೆ ಲಾರಿಯೊಂದು ಡಿಕ್ಕಿಯಾದ ಪರಿಣಾಮ, ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ 3 ವರ್ಷದ ಬಾಲಕ ಸಾವನ್ನಪ್ಪಿದ್ದು, ತಂದೆ-ತಾಯಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಕೆಸ್ತೂರು ಗೇಟ್ ನಲ್ಲಿ ಬೈಕ್ ನಲ್ಲಿ ದಂಪತಿಗಳು ಹಾಗೂ ಮಗು ತೆರಳುತ್ತಿದ್ದರು. ಈ ವೇಳೆಯಲ್ಲಿ ಲಾರಿಯೊಂದು ಬೈಕ್ ಗೆ ಡಿಕ್ಕಿಯಾಗಿದೆ. ಈ ಪರಿಣಾಮ ಸ್ಥಳದಲ್ಲೇ ಧನ್ವಿತ್(3) ಬಾಲಕ ಸಾವನ್ನಪ್ಪಿದ್ದಾನೆ. ಅವರ ತಂದೆ ತಾಯಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಗೊಂಡಿರುವಂತ ತಂದೆ ಆಂಜನೇಯ ಹಾಗೂ ತಾಯಿ ಮಮತಾಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಅಪಘಾತದ ಬಳಿಕ ಚಾಲಕ ಲಾರಿಯನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಈ ಸಂಬಂಧ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

BREAKING : ʻBMTCʼ ನೌಕರರ ಮುಷ್ಕರಕ್ಕೆ ಬ್ರೇಕ್‌ : 6 ತಿಂಗಳು ಪ್ರತಿಭಟನೆ ನಡೆಸದಂತೆ ರಾಜ್ಯ ಸರ್ಕಾರದಿಂದ ಅಧಿಸೂಚನೆ

ಗಮನಿಸಿ : ʻರೇಷನ್‌ ಕಾರ್ಡ್‌ʼ ನಲ್ಲಿ ನಿಮ್ಮ ಹೆಸರು ಇದೆಯಾ ಅಂತ ಈ ರೀತಿ ಚೆಕ್‌ ಮಾಡಿಕೊಳ್ಳಿ!

Share.
Exit mobile version