ಬೆಂಗಳೂರು : ಬೆಂಗಳೂರಿನಲ್ಲಿ ಪ್ರಿಯತಮೆಗಾಗಿ ಮನೆಗಳ್ಳತನ ಮಾಡುತ್ತಿದ್ದ ಆರೋಪಿಯನ್ನು ಹೆಬ್ಬಗೋಡಿ ಠಾಣೆ ಪೊಲೀಸರು ಇದೀಗ ಅರೆಸ್ಟ್ ಮಾಡಿದ್ದಾರೆ. ಬೆಂಗಳೂರಿನ ಹೆಬ್ಬಗೋಡಿ ಠಾಣೆ ಪೊಲೀಸರು ಆರೋಪಿ ಶ್ರೇಯಸ್ ನನ್ನು ಅರೆಸ್ಟ್ ಮಾಡಿದ್ದಾರೆ.
ಈತ ತನ್ನ ಪ್ರೇಯಸಿ ಚಿನ್ನದ ಓಲೆ ಮಾಡಿಸಿ ಕೊಡುವಂತೆ ಕೇಳಿದ್ದರಿಂದ ಕಳ್ಳತನ ಮಾಡಿದ್ದಾನೆ. ಹರೀಶ್ ಎಂಬುವವರ ಮನೆಯಲ್ಲಿ ಶ್ರೇಯಸ್ ಚಿನ್ನಾಭರಣ ಕಳ್ಳತನ ಮಾಡಿದ್ದು, ಸದ್ಯ 415ಗ್ರಾಂ ಚಿನ್ನಾಭರಣವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.