ಬೆಂಗಳೂರು: ನಿನ್ನೆ ತುಮಕೂರು ಜಿಲ್ಲೆಯ ಮಧುಗಿರಿಯ ಕೊಡಿಗೇನಹಳ್ಳಿಯಲ್ಲಿ ಸಂಪಿಗೆ ಬಿದ್ದ ಬಾಲಕ, ಆಸ್ಪತ್ರೆಯಲ್ಲಿ ಸೂಕ್ತ ಸಮಯದಲ್ಲಿ ಚಿಕಿತ್ಸೆ ಸಿಗದೇ ಸಾವನ್ನಪ್ಪಿದ್ದನು. ಈ ಘಟನೆ ಸಂಬಂಧ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಸರ್ಕಾರದ ವಿರುದ್ಧ ಕಿಡಿಕಾರಿದ್ದರು. ಈ ಬೆನ್ನಲ್ಲೇ ಘಟನೆ ಸಂಬಂಧ ಇಲಾಖಾ ತನಿಖೆಗೆ ಸಚಿವ ಸುಧಾಕರ್ ಆದೇಶಿಸಿದ್ದಾರೆ. ಅಲ್ಲದೇ ಆಂಬುಲೆನ್ಸ್ ಚಾಲಕನನ್ನು ಕೆಲಸದಿಂದ ವಜಾಗೊಳಿಸಿ ಆದೇಶಿಸಿದ್ದಾರೆ.

BIG NEWS: ‘ವರ್ಗಾವಣೆ ನಿರೀಕ್ಷೆ’ಯಲ್ಲಿದ್ದವರಿಗೆ ಬಿಗ್ ಶಾಕ್: ‘ಸಿಎಂ ಬೊಮ್ಮಾಯಿ’ ವರ್ಗಾವಣೆ ಪ್ರಸ್ತಾವನೆಗೆ ಬ್ರೇಕ್ | Karnataka Government Employee Transfer

ಈ ಕುರಿತಂತೆ ಸರಣಿ ಟ್ವಿಟ್ ಮಾಡಿರುವಂತ ಅವರು, ಮಧುಗಿರಿ ತಾಲ್ಲೂಕಿನ ಕೊಡಿಗೇನಹಳ್ಳಿಯಲ್ಲಿ ಶುಕ್ರವಾರ ಐದು ವರ್ಷದ ಬಾಲಕ ನೀರಿನ ಸಂಪ್ ನಲ್ಲಿ ಬಿದ್ದು ಆಕಸ್ಮಿಕವಾಗಿ ಸಾವನ್ನಪ್ಪಿರುವ ಘಟನೆ ನನ್ನ ಮನಸ್ಸಿಗೆ ತೀವ್ರ ಘಾಸಿ ಉಂಟುಮಾಡಿದ್ದು, ಈ ದುರಂತದಿಂದ ವಿಚಲಿತಗೊಂಡಿದ್ದೇನೆ ಎಂದು ಹೇಳಿದ್ದಾರೆ.

ಶುಕ್ರವಾರ ಸಂಜೆ ಸುಮಾರು 4:15 ವೇಳೆಗೆ ಮಗು ನೀರಿಗೆ ಬಿದ್ದಿರುವುದನ್ನು ಗಮನಿಸಿದ ಹೆತ್ತವರು ಕಂದಮ್ಮನನ್ನು ಉಳಿಸಿಕೊಳ್ಳುವ ಆಸೆಯಿಂದ ಸುಮಾರು 5 ಗಂಟೆ ವೇಳೆಗೆ ಕೊಡಿಗೇನಹಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಬಂದಿದ್ದಾರೆ ಎಂದು ತಿಳಿದು ಬಂದಿದೆ ಎಂದಿದ್ದಾರೆ.

ಆ ಸಂದರ್ಭದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಶುಶ್ರೂಷಕ ಅಧಿಕಾರಿ ಹಾಗೂ ಹಾಗೂ ಡಿ ಗ್ರೂಪ್ ಸಿಬ್ಬಂದಿಯೊಬ್ಬರು ಲಭ್ಯರಿದ್ದು, ಅಲ್ಲಿನ ವೈದ್ಯರು 4:30ರವರೆಗೆ ಓಪಿಡಿ ಸಮಯ ಮುಗಿಸಿ ಮೈದನಹಳ್ಳಿ ಪ್ರದೇಶಕ್ಕೆ ಕ್ಷೇತ್ರ ಭೇಟಿಗೆ ತೆರಳಿದ್ದರು ಎಂಬ ಮಾಹಿತಿ ತಿಳಿದು ಬಂದಿದೆ ಎಂದು ಹೇಳಿದ್ದಾರೆ.

ಘಟನೆಯ ಮಾಹಿತಿ ತಿಳಿದ ಕೂಡಲೇ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬಂದ ವೈದ್ಯರು ಆಸ್ಪತ್ರೆಗೆ ಬರುವ ಮುಂಚೆಯೇ ಮಗು ಮೃತಪಟ್ಟಿರುವುದಾಗಿ ದೃಢೀಕರಿಸಿದ್ದಾರೆ ಎಂದು ಹೇಳಿದ್ದಾರೆ.

ಕೊಡಿಗೇನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರವು 24/7 ಸೇವೆ ನೀಡುವ ಆಸ್ಪತ್ರೆಯಾಗಿರುವುದರಿಂದ ಇಬ್ಬರು ವೈದ್ಯರಿದ್ದು, ಪಾಳಿಯಂತೆ ಹೊಂದಾಣಿಕೆ ಮಾಡಿಕೊಂಡು ಯಾವುದೇ ಸಮಯದಲ್ಲಿ ಕನಿಷ್ಠ ಒಬ್ಬ ವೈದ್ಯರಾದರೂ ಕರ್ತವ್ಯದಲ್ಲಿ ಇರಬೇಕಾಗಿರುತ್ತದೆ ಎಂದಿದ್ದಾರೆ.

ಈ ಪ್ರಕರಣದ ಬಗ್ಗೆ ಇಲಾಖಾ ತನಿಖೆ ನಡೆಸಿ ಕರ್ತವ್ಯ ಲೋಪ ಕಂಡುಬಂದಲ್ಲಿ ಸಂಬಂಧಪಟ್ಟ ವೈದ್ಯರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಇದರ ಜೊತೆಗೆ ಆ ಸಂದರ್ಭದಲ್ಲಿ ತಡಮಾಡಿ ಕರ್ತವ್ಯ ಲೋಪ ಎಸಗಿರುವ ಅಂಬ್ಯುಲೆನ್ಸ್ ಚಾಲಕನನ್ನು ಕೂಡಲೇ ಕೆಲಸದಿಂದ ವಜಾಗೊಳಿಸಿದ್ದಾರೆ.

ಇದರೊಂದಿಗೆ ಸರ್ಕಾರಿ ಆಸ್ಪತ್ರೆಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ಮೆಡಿಕಲ್ ಕಾಲೇಜು ಆಸ್ಪತ್ರೆಗಳಲ್ಲಿ ವೈದ್ಯರು ಹಾಗೂ ಸಿಬ್ಬಂದಿಗಳ ಹಾಜರಾತಿ ಮೇಲೆ ನಿಗಾ ಇಡಲು ಜಿಯೋ ಟ್ಯಾಗಿಂಗ್ ವ್ಯವಸ್ಥೆ ಜಾರಿ ಮಾಡಲಾಗುತ್ತಿದ್ದು ಈ ಕ್ರಮದಿಂದ ಸರ್ಕಾರಿ ಆಸ್ಪತ್ರೆಗಳಲ್ಲಿ ಹೊಣೆಗಾರಿಕೆ ಹಾಗೂ ಶಿಸ್ತು ಹೆಚ್ಚಲಿದೆ ಎಂದು ಹೇಳಿದ್ದಾರೆ.

ಕೊಡಿಗೇನಹಳ್ಳಿಯಲ್ಲಿ ನಡೆದ ದುರ್ಘಟನೆಯಲ್ಲಿ ತಮ್ಮ 5 ವರ್ಷದ ಕಂದಮ್ಮನನ್ನು ಕಳೆದುಕೊಂಡ ತಂದೆ-ತಾಯಂದಿರ ಆಕ್ರಂದನ ನನ್ನ ಮನಸ್ಸನ್ನು ಜರ್ಜರಿತಗೊಳಿಸಿದೆ. ಕ್ರೂರ ವಿಧಿಯಾಟ ಆ ಹೆತ್ತವರಿಗೆ ತಂದೊಡ್ಡಿರುವ ನೋವಿನಲ್ಲಿ ನಾನೂ ಭಾಗಿ ಎಂದು ತಿಳಿಸಿದ್ದಾರೆ.

Share.
Exit mobile version