ಬೆಂಗಳೂರು: ಇಂದು ನಡೆದಂತ ನೀಟ್ ಪರೀಕ್ಷೆಯ ವೇಳೆಯಲ್ಲಿ ಕಲಬುರ್ಗಿ ಪರೀಕ್ಷಾ ಕೇಂದ್ರದಲ್ಲಿ ಅಭ್ಯರ್ಥಿಯೊಬ್ಬ ಜನಿವಾರವನ್ನು ತೆಗೆಸಿದ್ದರು. ಇಂತಹ ಘಟನೆಯನ್ನು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ತೀವ್ರವಾಗಿ ವಿರೋಧಿಸಿ, ಖಂಡಿಸಿದೆ.
ಇಂದು ಈ ಘಟನೆಯ ಬಗ್ಗೆ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ರಘುನಾಥ್ ಮಾತನಾಡಿ, ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ವಿಚಾರ ಗಮನಕ್ಕೆ ಬಂದಿದೆ. ಈ ಘಟನೆ ಮತ್ತೊಮ್ಮೆ ನಡೆದಿರುವುದು ದುರದೃಷ್ಟಕರ. ಸರ್ಕಾರ ಕ್ರಮವಹಿಸಿದ್ದರೂ ಈ ರೀತಿ ಆಗಿದ್ದು ಖಂಡನೀಯ. ಈ ಬಗ್ಗೆ ನಾವು ಮತ್ತೊಮ್ಮೆ ಸರ್ಕಾರದ ಗಮನಕ್ಕೆ ತರುತ್ತೇವೆ ಎಂದರು.
ಮುಂದಿನ ದಿನಗಳಲ್ಲಿ ಪರೀಕ್ಷೆ ವೇಳೆಯಲ್ಲಿ ಜನಿವಾರ ತೆಗೆಸಿದ್ರೇ ಹೋರಾಟಕ್ಕೂ ಪ್ಲಾನ್ ಮಾಡುತ್ತೇವೆ. ಇಂದು ನೀಟ್ ಪರೀಕ್ಷೆಯ ವೇಳೆಯಲ್ಲಿ ಜನಿವಾರ ತೆಗೆಸಿದಂತ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.
ಅಂಬೇಡ್ಕರ್ ಸೋಲಿಸಿದ್ದು ಕಾಂಗ್ರೆಸ್ ಅಲ್ಲವೆಂದು ಸಾಬೀತಾದ್ರೆ, ರಾಜೀನಾಮೆಗೆ ಸಿದ್ಧ: ಛಲವಾದಿ ನಾರಾಯಣಸ್ವಾಮಿ ಸವಾಲ್
Property Law: ತಂದೆಯ ಆಸ್ತಿಯಲ್ಲಿ ಯಾರಿಗೆಲ್ಲ ಪಾಲು ಇದೆ? ಕಾನೂನು ಏನು ಹೇಳುತ್ತದೆ? ಇಲ್ಲಿದೆ ಮಾಹಿತಿ