ಬಳ್ಖಾರಿ : ಮಾಜಿ ಸಿಎಂ ಸಿದ್ದರಾಮಯ್ಯ ಅವರ ‘ ಸಿದ್ದರಾಮಯ್ಯ 75’ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಬ್ರಾಹ್ಮಣರನ್ನು ಗುರಿಯಾಗಿಸಿಕೊಂಡು ಅವಹೇಳನ ಮಾಡಲಾಗಿದೆ ಎಂದು ಬ್ರಾಹ್ಮಣ ಸಮುದಾಯದವರು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಹಿನ್ನೆಲೆ ಪುಸ್ತಕದ ಲೇಖಕ ಮಲ್ಲೇಶ್ ವಿರುದ್ಧ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಬ್ರಾಹ್ಮಣ ನಿಗಮ ಮಂಡಳಿ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ಸಿದ್ದರಾಮಯ್ಯ ಕ್ಷಮೆಗೆ ಒತ್ತಾಯಿಸಿದ್ದಾರೆ. ಯಾರ ತಂಟೆಗೂ ಹೋಗದ ಬ್ರಾಹ್ಮಣರನ್ನು ವಿನಾಕಾರಣ ಕೆಣಕಲಾಗುತ್ತಿದೆ. ಇದಕ್ಕೆ ಸಿದ್ದರಾಮಯ್ಯ ಕೂಡ ಆಕ್ಷೇಪ್ತ ವ್ಯಕ್ತಪಡಿಸಿಲ್ಲ, ಆದ್ದರಿಂದ ಮಲ್ಲೇಶ್ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.
ಸಿದ್ದರಾಮಯ್ಯರ ಕಾರ್ಯಕ್ರಮದಲ್ಲಿ ಬ್ರಾಹ್ಮಣರ ಕುರಿತು ಅವಹೇಳನ ಹೇಳಿಕೆ ನೀಡಲಾಗಿದೆ., ಬ್ರಾಹ್ಮಣ ಸಮುದಾಯದವರನ್ನೇ ಗುರಿಯಾಗಿಸಿಕೊಂಡು ಮಾತನಾಡಲಾಗಿದೆ ಎಂದು ಬ್ರಾಹ್ಮಣ ನಿಗಮ ಮಂಡಳಿ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ ಇಂದು ಪ್ರತಿಭಟನೆಗೆ ಕರೆ ನೀಡಿದ್ದರು.
ಸಿದ್ದರಾಮಯ್ಯ-75 ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಪುಸ್ತಕದ ಲೇಖಕ , ಸಿದ್ದರಾಮಯ್ಯ ಆಪ್ತ ಮಲ್ಲೇಶ್ ಬ್ರಾಹ್ಮಣ ಸಮುದಾಯವನ್ನು ನೇರವಾಗಿ ಗುರಿ ಮಾಡಿ ಮಾತನಾಡಿದ್ದಾರೆ, ಬ್ರಾಹ್ಮಣ ಸಮುದಾಯವನ್ನು ನಂಬಬೇಡಿ, ಇದರಿಂದ ದೇಶ ನಾಶವಾಗುತ್ತದೆ ಎಂದು ಹೇಳಿದ್ದಾರೆ. ಇಂತಹ ಹೇಳಿಕೆಯನ್ನು ನಾವು ಖಂಡಿಸುತ್ತೇವೆ ಎಂದು ಸಚ್ಚಿದಾನಂದ ಮೂರ್ತಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
BREAKING NEWS : ವೇದಿಕೆಯಲ್ಲೇ ಕೇಂದ್ರ ಸಚಿವ ‘ನಿತಿನ್ ಗಡ್ಕರಿ’ ಅಸ್ವಸ್ಥ |Union Minister Nitin Gadkari