ಬೆಂಗಳೂರು : ಬ್ರ್ಯಾಂಡ್ ಬೆಂಗಳೂರು ಹೆಸರಲ್ಲಿ ಲೂಟಿ ನಡೀತಿದೆ. ಇದು ಬ್ರ್ಯಾಂಡ್ ಬೆಂಗಳೂರು ಅಲ್ಲ ಲೂಟಿ ಬೆಂಗಳೂರು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಡಿಕೆಶಿ ವಿರುದ್ಧ ವಾಗ್ದಾಳಿ ನಡೆಸಿದರು.
ಬೆಂಗಳೂರಿನ ಜೆಪಿ ಭವನದಲ್ಲಿ ನಡೆದ ಬಿಜೆಪಿ-ಜೆಡಿಎಸ್ ಸಮನ್ವಯ ಸಭೆಯಲ್ಲಿ ಮಾತಾಡಿದ ಕುಮಾರಸ್ವಾಮಿ, ಬೆಂಗಳೂರಿಗೆ ಈ ಸರ್ಕಾರ ಕೊಟ್ಟ ಕೊಡುಗೆಯಾದರೂ ಏನು? ಅಕ್ಕಿ ಕೊಡುವುದಕ್ಕೆ ಯೋಗ್ಯತೆ ಇಲ್ಲ. ಈ ಸರ್ಕಾರಕ್ಕೆ ಯೋಗ್ಯತೆ ಇಲ್ಲ. 5 ಕೆಜಿ ಅಕ್ಕಿ ಮೋದಿ ಸರ್ಕಾರ ನೀಡುತ್ತಿದೆ ಎಂದು ತಿಳಿಸಿದರು.
ಹೆಚ್ಚುವರಿ ಐದು ಕೆಜಿ ಹೆಚ್ಚು ಕೊಟ್ಟಿಲ್ಲ.ಈ ಕಡೆ ಹಣವು ಇಲ್ಲ ಕಳೆದ ಮೂರು ತಿಂಗಳಿನಿಂದ ಹೆಚ್ಚುವರಿ ಹಣ ನೀಡಿಲ್ಲ ಮಾ ತೆತ್ತಿದರೆ ಬ್ರಾಂಡ್ ಮಂಗಳೂರು ಎಂದು ಹೇಳುತ್ತಾರೆ.ಬ್ರಾಂಡ್ ಬೆಂಗಳೂರು ಅಲ್ಲ ಇದು ಲೂಟಿ ಬೆಂಗಳೂರು ಎಂದು ಕಾಂಗ್ರೆಸ್ ವಿರುದ್ಧ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ನಡೆಸಿದರು.
ಎರಡು ಮೂರು ಮಳೆಗೇ ಬೆಂಗಳೂರಿನಲ್ಲಿ ಮನೆಗಳಿಗೆ ನೀರು ತುಂಬಿಕೊಂಡಿದೆ. ಬಿಡಿಎನಲ್ಲಿ ಮೊನ್ನೆ ಕ್ಲೋಸ್ಡ್ ಡೋರ್ ಮೀಟಿಂಗ್ ಮಾಡಿದ್ದಾರಂತೆ. ಬಹಳ ರಹಸ್ಯವಾಗಿ ಸಭೆ ಮಾಡಿದ್ದಾರಂತೆ. ಬೆಂಗಳೂರಿಗೆ ಇವರ ಕೊಡುಗೆ ಏನು? ಲೂಟಿ ಅಷ್ಟೇ ಎಂದು ಡಿಕೆಶಿ ಹೆಸರೇಳದೆ ಕಿಡಿಕಾರಿದರು.