ನವದೆಹಲಿ : ಬರ್ಮಿಂಗ್ಹ್ಯಾಮ್ನಲ್ಲಿ ನಡೆದ ಕಾಮನ್ವೆಲ್ತ್ ಗೇಮ್ಸ್ 2022ರಲ್ಲಿ ಭಾರತವು 22 ಚಿನ್ನ, 16 ಬೆಳ್ಳಿ ಮತ್ತು 23 ಕಂಚು ಸೇರಿದಂತೆ 61 ಪದಕಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದೆ. ಜುಲೈ 28 ರಿಂದ ಆಗಸ್ಟ್ 8ರವರೆಗೆ, ಸುಮಾರು 200 ಭಾರತೀಯ ಕ್ರೀಡಾಪಟುಗಳು ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ 16 ವಿವಿಧ ಕ್ರೀಡೆಗಳಲ್ಲಿ ಪದಕಗಳಿಗಾಗಿ ಸ್ಪರ್ಧಿಸಿದರು.
ಆಗಸ್ಟ್ 13 ರಂದು 75ನೇ ಸ್ವಾತಂತ್ರ್ಯ ದಿನಾಚರಣೆಗೆ ಮುಂಚಿತವಾಗಿ, ಪ್ರಧಾನಿ ನರೇಂದ್ರ ಮೋದಿ ಅವರು 2022ರ ಕಾಮನ್ವೆಲ್ತ್ ಕ್ರೀಡಾಕೂಟದ ಪದಕ ವಿಜೇತರಿಗೆ ಶನಿವಾರ ಬೆಳಿಗ್ಗೆ 11 ಗಂಟೆಗೆ ತಮ್ಮ ಅಧಿಕೃತ ನಿವಾಸದಲ್ಲಿ ಆತಿಥ್ಯ ವಹಿಸಲಿದ್ದಾರೆ.
ಕುಸ್ತಿ ಆರು ಚಿನ್ನ ಸೇರಿದಂತೆ 12 ಪದಕಗಳೊಂದಿಗೆ ಪದಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ರೆ, ವೇಟ್ ಲಿಫ್ಟಿಂಗ್ 10 ಪದಕಗಳನ್ನ ಹೊಂದಿದೆ. 2010ರಲ್ಲಿ ತವರಿನಲ್ಲಿ ನಡೆದ ಕ್ರೀಡಾಕೂಟದಲ್ಲಿ ಒಟ್ಟು 101 ಪದಕಗಳನ್ನು ಗೆದ್ದಿರುವ ಭಾರತ, ಕಾಮನ್ ವೆಲ್ತ್ ಕ್ರೀಡಾಕೂಟದ ಇತಿಹಾಸದಲ್ಲಿ ಸಾರ್ವಕಾಲಿಕ 5ನೇ ಅತ್ಯುತ್ತಮ ಪ್ರದರ್ಶನ ನೀಡಿದೆ.