ನವದೆಹಲಿ: ರಾಷ್ಟ್ರೀಯ ಕ್ರೀಡಾಕೂಟ 2022 ಆರಂಭವಾಗಿದೆ. ಈ ನಡುವೆ ಈ ಕ್ರೀಡಾ ಕೂಟದಲ್ಲಿ ವೇಟ್ ಲಿಫ್ಟರ್ ಮೀರಾಬಾಯಿ ಚಾನು ಉತ್ತಮ ಆರಂಭ ಕಂಡಿದ್ದು. ಶುಕ್ರವಾರ ಚಿನ್ನದ ಪದಕ ಜಯಿಸಿದ್ದಾರೆ. ಅಂದ ಹಾಗೇ ಮೀರಾಬಾಯಿ ಮಣಿಪುರವನ್ನು ಮುನ್ನಡೆಸುತ್ತಿದ್ದಾರೆ. ಕಾಮನ್ವೆಲ್ತ್ ಗೇಮ್ಸ್ ಮತ್ತು ಟೋಕಿಯೊ ಒಲಿಂಪಿಕ್ಸ್ನಲ್ಲಿ ಪದಕ ಗೆದ್ದು ದೇಶಕ್ಕೆ ಕೀರ್ತಿ ತಂದಿದ್ದರು. ಮೀರಾಬಾಯಿ, ತಮ್ಮ ಅತ್ಯುತ್ತಮ ಪ್ರದರ್ಶನವನ್ನು ಕಾಯ್ದುಕೊಂಡು, ರಾಷ್ಟ್ರೀಯ ಕ್ರೀಡಾಕೂಟದಲ್ಲೂ ಚಿನ್ನವನ್ನು ವಶಪಡಿಸಿಕೊಂಡರು.
ಮೀರಾಬಾಯಿ ಚಾನು ಕಾಮನ್ವೆಲ್ತ್ ಗೇಮ್ಸ್ 2022 ಚಿನ್ನದ ಪದಕವನ್ನು ಗೆದ್ದಿದ್ದಾರೆ. 2022ರ ರಾಷ್ಟ್ರೀಯ ಕ್ರೀಡಾಕೂಟದಲ್ಲೂ ಚಿನ್ನ ಗೆದ್ದಿದ್ದರು. 49 ಕೆಜಿ ಮಹಿಳೆಯರ ವಿಭಾಗದಲ್ಲಿ ಮೀರಾಬಾಯಿ ಈ ಪದಕ ಗೆದ್ದಿದ್ದಾರೆ. ಸಂಜಿತಾ ಚಾನು ಬೆಳ್ಳಿ ಪದಕ ಗೆದ್ದಿದ್ದಾರೆ. ಒಡಿಶಾದ ಸ್ನೇಹಾ ಸೊರೆನ್ ಕಂಚಿನ ಪದಕ ಗೆದ್ದಿದ್ದಾರೆ. ಮೀರಾಬಾಯಿ ಅವರು 107 ಕೆಜಿ ಎತ್ತುವ ಮೂಲಕ ಚಿನ್ನ ಗೆದ್ದಿದ್ದಾರೆ.
ಮೀರಾಬಾಯಿ ಅವರು ಹಲವು ಸಂದರ್ಭಗಳಲ್ಲಿ ದೇಶಕ್ಕಾಗಿ ಪದಕಗಳನ್ನು ಗೆದ್ದಿದ್ದಾರೆ ಎಂಬುದು ಗಮನಿಸಬೇಕಾದ ಸಂಗತಿ. ಅವರು ಕಾಮನ್ವೆಲ್ತ್ ಚಾಂಪಿಯನ್ಶಿಪ್ 2015 ರಲ್ಲಿ ಬೆಳ್ಳಿ ಪದಕವನ್ನು ಗೆದ್ದಿದ್ದಾರೆ. ಇದರ ನಂತರ ಅವರು 2017 ರಲ್ಲಿ ಗೋಲ್ಡ್ ಕೋಸ್ಟ್ನಲ್ಲಿ ಚಿನ್ನದ ಪದಕ ಗೆದ್ದರು. ಮೀರಾಬಾಯಿ 2019ರಲ್ಲೂ ಚಿನ್ನ ಗೆದ್ದಿದ್ದರು. ನಾವು ಕಾಮನ್ವೆಲ್ತ್ ಕ್ರೀಡಾಕೂಟದ ಬಗ್ಗೆ ಮಾತನಾಡುವುದಾದರೆ, ಅವರು ಗ್ಲಾಸ್ಗೋ 2014 ರಲ್ಲಿ ಬೆಳ್ಳಿ ಪದಕವನ್ನು ಗೆದ್ದಿದ್ದಾರೆ. ಇದರ ನಂತರ ಅವರು 2018 ರಲ್ಲಿ ಗೋಲ್ಡ್ ಕೋಸ್ಟ್ನಲ್ಲಿ ಚಿನ್ನದ ಪದಕವನ್ನು ಗೆದ್ದರು. 2022ರಲ್ಲಿ ಬರ್ಮಿಂಗ್ಹ್ಯಾಮ್ನಲ್ಲಿ ಚಿನ್ನ ಗೆದ್ದಿದ್ದಾರೆ.
Here's Our Champ @mirabai_chanu 🏋️ sharing her experience after winning Gold 🥇in the 49kg weight category 🤩 at the #36thNationalGames 💯
Many congratulations Mira!! #NationalGames2022@WeAreTeamIndia @Nat_Games_Guj @sagofficialpage @SAI_imphal @ddsportschannel pic.twitter.com/yAX6dvjaDM
— SAI Media (@Media_SAI) September 30, 2022