ಮುಂಬೈ. ಮಹಾರಾಷ್ಟ್ರದ ರಾಜಧಾನಿ ಮುಂಬೈನ ಮೂರು ಸ್ಥಳಗಳಲ್ಲಿ ಬಾಂಬ್ ಬೆದರಿಕೆಗಳು ಬಂದಿವೆ ಎನ್ನಲಾಗಿದೆ. ಬುಧವಾರ ಮಧ್ಯಾಹ್ನ ಪೊಲೀಸ್ ನಿಯಂತ್ರಣ ಕೊಠಡಿಗೆ ಈ ಬೆದರಿಕೆ ಕರೆ ಬಂದಿದ್ದು, ಅಂಧೇರಿಯ ಇನ್ಫಿನಿಟಿ ಮಾಲ್, ಜುಹುವಿನ ಪಿವಿಆರ್ ಮತ್ತು ಸಾಂತಾಕ್ರೂಜ್ನಲ್ಲಿರುವ ಸಹಾರಾ ಪಂಚತಾರಾ ಹೋಟೆಲ್ಗಳನ್ನು ಸ್ಫೋಟಿಸುವುದಾಗಿ ಬೆದರಿಕೆ ಕರೆ ಬಂದಿದೆ ಎನ್ನಲಾಗಿದೆ. ಮುಂಬೈ ಪೊಲೀಸರು ಮತ್ತು ಕ್ರೈಂ ಬ್ರಾಂಚ್ ಅಲರ್ಟ್ ಮೋಡ್ನಲ್ಲಿ ಬಂದಿದ್ದು, ಪ್ರಸ್ತುತ ಫೋನ್ ಕರೆಗಳ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಅಂತ ತಿಳಿದು ಬಂದಿದೆ.
ಈ ಸುದ್ದಿ ಈಗಷ್ಟೇ ಬಂದಿದೆ ಹೆಚ್ಚಿನ ಮಾಹಿತಿ ಪಡೆದ ತಕ್ಷಣ, ನಾವು ಈ ಪುಟದಲ್ಲಿ ಹೆಚ್ಚಿನ ಮಾಹಿತಿಯನ್ನು ನವೀಕರಣ ಮಾಡುತ್ತೇವೆ, ಸ್ವಲ್ಪ ಸಮಯದ ನಂತರ ಪುನಃ ಈ ಪುಟಕ್ಕೆ ಭೇಟಿ ನೀಡಿ