ಬೆಂಗಳೂರು : ಎಣ್ಣೆ ಪಾರ್ಟಿ ಮಾಡುತ್ತಿದ್ದ ಸ್ನೇಹಿತರ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ನಡೆದಿದ್ದು, ಬೀಯರ್ ಗೆ ಮಿಕ್ಸ್ ಮಾಡಲು ನೀರು ಕೊಡಲು ತಡಮಾಡಿದಕ್ಕೆ ಸ್ನೇಹಿತರೆ ಯುವಕನೋರ್ವನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ಬಳಿಯ ನಾರಾಯಣಪುರದಲ್ಲಿ ಘಟನೆ ನಡೆದಿದೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ನಿರುದ್ಯೋಗಿಗಳಿಗೆ ಗುಡ್ ನ್ಯೂಸ್: ಫೆ. 26 ರಿಂದ ಬೆಂಗಳೂರಿನಲ್ಲಿ ಎರಡು ದಿನಗಳ ‘ಉದ್ಯೋಗ ಮೇಳ’
ನಾರಾಯಣಪುರ ನಿವಾಸಿ ಮುರುಗೇಶ್ (42) ಇರಿತಕ್ಕೊಳಗಾದ ವ್ಯಕ್ತಿ. ಇದೇ ಊರಿನ ನಿವಾಸಿಗಳಾದ ಸತೀಶ್ ಮತ್ತು ನವೀನ್ ಎಂಬುವವರು ಚಾಕು ಇರಿದ ಆರೋಪಿಗಳಾಗಿದ್ದಾರೆ. ನಾರಾಯಣಪುರ ಸಮೀಪದ ಗುಲ್ಲಣ್ಣ ಲೇವೇಟ್ ಬಡಾವಣೆಯೊಂದರಲ್ಲಿ ಆರೋಪಿಗಳು ರಾತ್ರಿ ವೇಳೆ ಎಣ್ಣೆ ಪಾರ್ಟಿ ನಡೆಸುತ್ತಿದ್ದರು.
ಇಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಿಂದ ನೀರಿನ ಅದಾಲತ್ | water adalat
ರಾತ್ರಿ 12:30ರ ಸುಮಾರಿಗೆ ನೀರಿಗಾಗಿ ಮುರುಗೇಶ್ ಮನೆ ಬಾಗಿಲು ತಟ್ಟಿದ್ದಾರೆ. ಆದರೆ ನೀರು ಬೇಗ ಕೊಡಲಿಲ್ಲ ಎಂಬ ಕಾರಣಕ್ಕೆ ಆರೋಪಿಗಳು ಚಾಕುವಿನಿಂದ ತಲೆ, ಮುಖದ ಭಾಗಕ್ಕೆ ಹಲ್ಲೆ ನಡೆಸಿ ಸ್ಥಳದಿಂದ ಪರಾರಿಯಾಗಿದ್ದಾರೆ. ಗಾಯಾಳುವಿಗೆ ಆನೇಕಲ್ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ನಗರದ ನಿಮಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಸಂಬಂಧ ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ರಣತಂತ್ರ : ಕಲಬುರ್ಗಿಯಿಂದ ಸ್ಪರ್ಧೆಸುತ್ತಾರ ಖರ್ಗೆ?