ಮಂಗಳೂರು : ಮಂಗಳೂರಿನ ಪೆಣಂಬೂರು ಬೀಚ್ ನಲ್ಲಿ ಸಮುದ್ರದ ದಡದಲ್ಲಿ ಮೂವರು ಯುವಕರು ಆಟವಾಡಲು ತೆರಳಿದ್ದಾಗ ಅಲೆಗಳ ರಭಸಕ್ಕೆ ಮೂವರು ಯುವಕರು ಸಮುದ್ರ ಪಾಲಾಗಿರುವ ಘಟನೆ ನಡೆದಿದೆ.
US Election 2024: ವಾಷಿಂಗ್ಟನ್, ಡಿ.ಸಿ.ಯಲ್ಲಿ ರಿಪಬ್ಲಿಕನ್ ಪ್ರೈಮರಿಯನ್ನು ಗೆದ್ದ ‘ನಿಕ್ಕಿ ಹ್ಯಾಲೆ’
ಸಮುದ್ರ ತೀರದಲ್ಲಿ ಲೈಫ್ ಗಾರ್ಡ್ ಎಚ್ಚರಿಕೆಯ ಹೊರತಾಗಿಯೂ ಸಮುದ್ರದಲ್ಲಿ ಆಟವಾಡುತ್ತಿದ್ದಾಗ ಅಲೆಗಳ ರಭಸಕ್ಕೆ ಮೂವರು ಯುವಕರು ನಾಪತ್ತೆಯಾಗಿದ್ದು, ಆಲೆಗಳಲ್ಲಿ ಕೊಚ್ಚಿ ಹೋದ ಯುವಕರನ್ನು ಮಿಲನ್(20), ಲಿಖಿತ್(18) ಹಾಗೂ ನಾಗರಾಜ್ (24) ಎಂದು ಗುರುತಿಸಲಾಗಿದೆ.
BREAKING: ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ : ತನಿಖೆಗಾಗಿ ಎನ್ಐಎಗೆ ಕೇಸ್ ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ
ನಿನ್ನೆ ಸಂಜೆ 6 ಗಂಟೆಯ ಸುಮಾರಿಗೆ ಪಣಂಬೂರು ಸಮುದ್ರ ಕಿನಾರೆಯಲ್ಲಿ ಆಟವಾಡುತ್ತಿದ್ದ ವೇಳೆ ಬೃಹತ್ ಅಲೆಗಳ ಹೊಡೆತಕ್ಕೆ ಸಿಲುಕಿ ಮೂವರೂ ನೀರು ಪಾಲಾಗಿದ್ದಾರೆ. ನಾಪತ್ತೆಯಾದ ಯುವಕರಿಗಾಗಿ ಮುಳುಗತಜ್ಞರು ಹುಡುಕಾಟ ನಡೆಸುತ್ತಿದ್ದಾರೆ.
ರಾಜ್ಯ ಬಿಜೆಪಿಯಿಂದ 15ಕ್ಕೂ ಹೆಚ್ಚು ಕ್ಷೇತ್ರಗಳಿಗೆ ಸಂಭಾವ್ಯರ ಹೆಸರು ಫೈನಲ್ : ಕೋರ್ ಕಮಿಟಿ ಸಭೆಯಲ್ಲಿ ನಾಯಕರ ಒಪ್ಪಿಗೆ
ಮಿಲನ್ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ. ಲಿಖಿತ್ ಕೈಕಂಬದ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ. ನಾಗರಾಜ್ ಬೈಕಂಪಾಡಿಯ ಕಂಪನಿಯಲ್ಲಿ ಮೇಲ್ವಿಚಾರಕನಾಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಘಟನೆ ಕುರಿತಂತೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.