ಮೈಸೂರು : ಲೋಕಸಭಾ ಚುನಾವಣೆ ದಿನಾಂಕ ಘೋಷಣೆಯಾದ ಬಳಿಕ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದ್ದು, ಅಕ್ರಮಗಳನ್ನು ತಡೆಯಲು ಚಪ್ಪೋಸ್ ಗಳನ್ನು ನಿರ್ಮಿಸಲಾಗಿದ್ದು, ಇದೀಗ ಮೈಸೂರಿನ ನಂಜನಗೂಡಿನಲ್ಲಿ 98.56 ಕೋಟಿ ರೂ ಮೌಲ್ಯದ ಬೀಯರ್ ಹಾಗೂ ಕಚ್ಚಾ ವಸ್ತುಗಳನ್ನು ಅಬಕಾರಿ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಮೈಸೂರು ಜಿಲ್ಲೆಯ ನಂಜನಗೂಡಿನ ಯುಬಿ ತಯಾರಿಕಾ ಘಟಕದಲ್ಲಿ ಇವುಗಳನ್ನು ವಶಪಡಿಸಿಕೊಳ್ಳಲಾಗಿದೆ. ಚಾಮರಾಜನಗರ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ನಂಜನಗೂಡಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಚಾಮರಾಜನಗರ ಅಬಕಾರಿ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ ನಡೆಸಿದೆ.ದಾಳಿಯ ಬೆಳೆ 6.3 ಲಕ್ಷ ಬಿಯರ್ ಪೆಟ್ಟಿಗೆ ಟ್ಯಾಂಕ್ ನಲ್ಲಿದ್ದ 66 ಲಕ್ಷ ಲೀಟರ್ ಬಿಯರ್, 6.5ಲಕ್ಷ ಮೌಲ್ಯದ ಕಚ್ಚಾ ವಸ್ತುಗಳು ಸೇರಿ ಒಟ್ಟು 98.52 ಕೋಟಿ ಮೌಲ್ಯದ ವಸ್ತು ವಶಪಡಿಸಿಕೊಳ್ಳಲಾಗಿದೆ.
ಅಕ್ರಮವಾಗಿ ಸಂಗ್ರಹಿಸಿದ್ದ ರೂ.7,000 ಬಿಯರ್ ರಟ್ಟಿನ ಪಟ್ಟಿಗೆಗಳು ಸೇರಿದಂತೆ ಘಟಕದಲ್ಲಿ ನಿಗದಿಗಿಂತ ಹೆಚ್ಚುವರಿ ಮದ್ಯ ತಯಾರಿಸಿ ಕೇರಳಕ್ಕೆ ಮಾಡುತ್ತಿದ್ದರು ಎಂದು ಮಾಹಿತಿ ಬಂದ ತಕ್ಷಣ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.