ಬೆಳಗಾವಿ : ಚೋರ್ಲಾ ಘಾಟ್ ಬಳಿಯ 400 ಕೋಟಿ ದರೋಡೆ ಪ್ರಕರಣ ಬಗೆದಷ್ಟು ಬಯಲಾಗ್ತಿದೆ. ಹಣ ಪ್ರಭಾವಿ ರಾಜಕಾರಣಿಗೆ ಸೇರಿದ್ದಾಗಿರಬಹುದು ಎಂಬ ವಿಚಾರ ತನಿಖೆ ವೇಳೆ ಬೆಳಕಿಗೆ ಬಂದಿದೆ. ಎರಡು ಸಾವಿರ ರೂಪಾಯಿ ನೋಟುಗಳನ್ನು ಬದಲಾಯಿಸಲು ಸಾಗಿಸುವಾಗ ಕಂಟೇನರ್ ನಾಪತ್ತೆಯಾಗಿದೆ.
ಹೌದು 400 ಕೋಟಿ ರಾಬರಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಮತ್ತೊಂದು ಟ್ವಿಸ್ಟ್ ಸಿಕ್ಕಿದ್ದು, ಹಣ ತುಂಬಿದ್ದ ಕಂಟೇನರ್ಗಳ ಹೈಜಾಕ್ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮಹಾರಾಷ್ಟ್ರ ಸರ್ಕಾರ, ಎಸ್ಐಟಿಯಿಂದ ತನಿಖೆ ಚುರುಕುಗೊಳಿಸಿದೆ. ಈ ನಡುವೆ ಕೆಲ ಪ್ರಮುಖ ಅಂಶಗಳು ಹುಬ್ಬೇರುವಂತೆ ಮಾಡಿದ್ದು, ಎರಡು ಸಾವಿರ ಮುಖ ಬೆಲೆಯ ನೋಟುಗಳು ಗುಜರಾತ್ನ ಪವರ್ ಫುಲ್ ರಾಜಕಾರಣಿಗೆ ಸೇರಿದ್ದು ಎಂಬ ಸುದ್ದಿ ಹರಿದಾಡತೊಡಗಿದೆ.
ಕಿಶೋರ್ ಸಾಳ್ವೆ ಅಲಿಯಾಸ್ ಸೇಠ್ ಬರೀ ಮಧ್ಯವರ್ತಿಯಾಗಿ ಕೆಲಸ ಮಾಡಿದ್ದ, ನೋಟು ಬದಲಾವಣೆಗಾಗಿ ಗೋವಾದಿಂದ ಹಣ ಸಾಗಿಸಲಾಗುತ್ತಿತ್ತು. ಇದರ ಜವಾಬ್ದಾರಿ ಆರೋಪಿ ವಿರಾಟ್ಗೆ ಕಿಶೋರ್ ನೀಡಿದ್ದ. ವಿರಾಟ್ ಹುಡುಗರಿಂದ ಹಣ ಸಾಗಾಟದ ವೇಳೆ ಕಂಟೇನರ್ ಮಿಸ್ಸಿಂಗ್ ಆಗಿದೆ. ಹಣದ ಸಮೇತ ಹುಡುಗರು ನಾಪತ್ತೆ ಆಗಿದ್ದಾರೆ ಎನ್ನಲಾಗಿದೆ.
ಇನ್ನು ಕಿಶೋರ್ ಮತ್ತು ಜಯೇಶ್ ಮಾತನಾಡಿರುವ ಸಂಭಾಷಣೆಯಲ್ಲಿ ಹಣ ಗುಜರಾತ್ನ ರಾಜಕಾರಣಿಗೆ ಸೇರಿದ್ದು ಎಂಬ ವಿಚಾರ ಕೂಡ ಬೆಳಕಿಗೆ ಬಂದಿದೆ. ಹೀಗಾಗಿ ಆಡಿಯೋ ಸಂಭಾಷಣೆ ಹಾಗೂ ವಾಟ್ಸ್ಯಾಪ್ ಕಾಲ್ ಸಂಭಾಷಣೆ ಆಧಾರದ ಮೇಲೆ ಮಹಾರಾಷ್ಟ್ರದ ಎಸ್ಐಟಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಪ್ರಕರಣ ಸಂಬಂಧ ಸದ್ಯ ವಿರಾಟ್ನ ಬಂಧಿಸಿ ವಿಚಾರಣೆ ನಡೆಸಲಾಗ್ತಿದೆ.








