ಬೆಳಗಾವಿ : ಅಭಯ್ ಪಾಟೀಲ್ ಅವರ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ ಶಾಸಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಅವರು ತಿಳಿಸಿದ್ದಾರೆ.
ಹೌದು ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ವಿರುದ್ಧ ಲೋಕಾಯುಕ್ತ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.