ತುಮಕೂರು : ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹೊಸೂರಿನಲ್ಲಿ ಮೂವರು ಮಕ್ಕಳೊಂದಿಗೆ ತಾಯಿ ನಾಪತ್ತೆಯಾಗಿರುವ ಘಟನೆ ನಡೆದಿದೆ.
ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹೊಸೂರಿನ ಮೂರು ಮಕ್ಕಳಾದ ತನುಶ್ರೀ (8) ಭೂಮಿಕ (6) ಯೋಗಿತಾ (4) ಜೊತೆ ವಸಂತ ಕುಮಾರಿ (25) ಎನ್ನುವ ತಾಯಿ ನಾಪತ್ತೆಯಾಗಿದ್ದಾಳೆ. ಜನವರಿ 16ರಂದು ತಾಯಿ ಹಾಗೂ ಮೂವರು ಮಕ್ಕಳು ನಾಪತ್ತೆಯಾಗಿದ್ದಾರೆ.ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಿಎಂಗೆ ಕಪ್ಪು ಬಾವುಟ ಪ್ರದರ್ಶಿಸುವವರ ವಶಕ್ಕೆ ಪಡೆದ ಪೊಲೀಸ್
ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲು ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿಗೆ ಭೇಟಿ ನೀಡಲಿದ್ದು, ಈ ವೇಳೆ ಡಿಎಸ್ಎಸ್ ಮುಖಂಡರು ಕಪ್ಪು ಬಾವುಟ ಪ್ರದರ್ಶನಕ್ಕೆ ಮುಂದಾಗಿರುವ ಮಾಹಿತಿ ತಿಳಿದು ಕೂಡಲೇ ಪೊಲೀಸರು ಇದೀಗ ಡಿಎಸ್ಎಸ್ ಮುಖಂಡರನ್ನು ವಶಪಡಿಸಿಕೊಂಡಿದ್ದಾರೆ.
ಮುದ್ದೇಬಿಹಾಳ ಠಾಣೆ ಪೊಲೀಸ್ರಿಂದ ಡಿಎಸ್ಎಸ್ ಮುಖಂಡರನ್ನು ವಶಕ್ಕೆ ಪಡೆಯಲಾಗಿದೆ.ನಾಲತವಾಡ ಅಂಬೇಡ್ಕರ್ ಮೂರ್ತಿ ನಿರ್ಮಾಣ ಕಾಮಗಾರಿ ಅಪೂರ್ಣ ಹಿನ್ನೆಲೆಯಲ್ಲಿ ತಾಲೂಕು ಆಡಳಿತ ನಿರ್ಲಕ್ಷ್ಯ ಮಾಡಿದೆ ಎಂದು ಆರೋಪಿಸಿ ಕಪ್ಪು ಬಾವುಟ ಪ್ರದರ್ಶಿಸಲು ಮುಂದಾಗಿದ್ದ ಡಿಎಸ್ಎಸ್ ಮುಖಂಡರಾದ ಹರೀಶ್ ನಾಟಿಕಾರ್, ಬಸವರಾಜನ್ನು ಇದೀಗ ಪೊಲೀಸರು ವಶಪಡಿಸಿಕೊಂಡಿದ್ದಾರೆ.