ಬೆಂಗಳೂರು : ನಾಳೆ ಬೆಳಿಗ್ಗೆ 10:30ಕ್ಕೆ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದ್ದು, ಇದೀಗ ಟ್ವೀಟ್ ನಲ್ಲಿ ಸಿದ್ದರಾಮಯ್ಯ ರಾಜ್ಯದ ಜನತೆಗೆ ವಿದಾಯದ ಸಂದೇಶ ತಿಳಿಸಿದ್ದಾರೆ. ರಾಜ್ಯದ ಜನರ ಆಶೀರ್ವಾದದೊಂದಿಗೆ ನಾವು ಅಧಿಕಾರಕ್ಕೆ ಬಂದು ಮೂರು ವರ್ಷಗಳು ಪೂರೈಸಿರುವ ಈ ಸಾರ್ಥಕ ಸಂದರ್ಭದಲ್ಲಿ ನಮ್ಮ ಸರ್ಕಾರದ ಎಲ್ಲಾ ಸಾಧನೆಗಳ ಶ್ರೇಯವನ್ನು ಪ್ರತಿಯೊಬ್ಬ ಕನ್ನಡಿಗನಿಗೂ ಅರ್ಪಿಸುತ್ತಿದ್ದೇವೆ.
ಚುನಾವಣಾ ಪೂರ್ವದಲ್ಲಿ ರಾಜ್ಯದ ಜನತೆಗೆ ನೀಡಿದ ಪ್ರತಿ ಮಾತಿಗೂ ಬದ್ಧರಾಗಿ ನಡೆಯುವ ಮೂಲಕ ನುಡಿದಂತೆ ನಡೆದ ಹೆಮ್ಮೆ ನಮಗಿದೆ. 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ, ಪ್ರತಿ ಮನೆಗೂ ತಲುಪಿಸುವಲ್ಲಿ ಯಶಸ್ವಿಯಾಗಿದ್ದೇವೆ.
ಯಾರೂ ಹಸಿವಿನಿಂದ ಮಲಗಬಾರದು ಎಂಬ ಸಂಕಲ್ಪದೊಂದಿಗೆ ಜಾರಿಗೊಂಡ ಅನ್ನಭಾಗ್ಯ ಯೋಜನೆಯು ಕೋಟ್ಯಂತರ ಕುಟುಂಬಗಳಿಗೆ ಪೌಷ್ಟಿಕ ಆಹಾರದ ಭದ್ರತೆ ನೀಡುವ ಮೂಲಕ ಆರೋಗ್ಯವಂತ ಸಮಾಜಕ್ಕೆ ಆಧಾರವಾಗಿದೆ. ಅನ್ನಭಾಗ್ಯ ಯೋಜನೆಯಡಿ ಉಚಿತ ಆಹಾರಧಾನ್ಯ ವಿತರಿಸಲು ಈವರೆಗೆ 18,897 ಕೋಟಿ ರೂ. ವ್ಯಯಿಸಲಾಗಿದ್ದು, 4.26 ಕೋಟಿ ಪಡಿತರದಾರರು ಮೂರು ಹೊತ್ತು ನೆಮ್ಮದಿಯಿಂದ ಊಟ ಮಾಡುತ್ತಿದ್ದಾರೆ.
ರಾಜ್ಯದ ಜನರ ಆಶೀರ್ವಾದದೊಂದಿಗೆ ನಾವು ಅಧಿಕಾರಕ್ಕೆ ಬಂದು ಮೂರು ವರ್ಷಗಳು ಪೂರೈಸಿರುವ ಈ ಸಾರ್ಥಕ ಸಂದರ್ಭದಲ್ಲಿ ನಮ್ಮ ಸರ್ಕಾರದ ಎಲ್ಲಾ ಸಾಧನೆಗಳ ಶ್ರೇಯವನ್ನು ಪ್ರತಿಯೊಬ್ಬ ಕನ್ನಡಿಗನಿಗೂ ಅರ್ಪಿಸುತ್ತಿದ್ದೇವೆ.
ಚುನಾವಣಾ ಪೂರ್ವದಲ್ಲಿ ರಾಜ್ಯದ ಜನತೆಗೆ ನೀಡಿದ ಪ್ರತಿ ಮಾತಿಗೂ ಬದ್ಧರಾಗಿ ನಡೆಯುವ ಮೂಲಕ ನುಡಿದಂತೆ ನಡೆದ ಹೆಮ್ಮೆ ನಮಗಿದೆ. 5… pic.twitter.com/uVi9UzyQvP
— Siddaramaiah (@siddaramaiah) May 27, 2026








