ಹುಬ್ಬಳ್ಳಿ : ಕಳೆದ ಒಂದು ವಾರದಿಂದ ಹುಬ್ಬಳ್ಳಿಯಲ್ಲಿ ಸಾಲು ಸಾಲು ಲವ್ ಜಿಹಾದ್ ಪ್ರಕರಣಗಳು ಬೆಳಕಿಗೆ ಬಂದಿದ್ದು, ಹುಬ್ಬಳ್ಳಿ ಜನತೆ ಸಹಜವಾಗಿ ಬೆಚ್ಚಿಬಿದ್ದಿದ್ದಾರೆ. ಮೊದಲನೇ ಪ್ರಕರಣದಲ್ಲಿ ಸಮೀರ್ ಯುವತಿಗೆ ಮತ್ತು ಬರಿಸುವ ಜ್ಯೂಸ್ ಕುಡಿಸಿ ಅತ್ಯಾಚಾರ ಎಸಗಿರುವ ಆರೋಪ ಕೇಳಿ ಬಂದಿದೆ. ಇನ್ನು ಎರಡನೇ ಪ್ರಕರಣದಲ್ಲಿ ಮುಫೀಸ್ ಎಂಬಾತ ಯುವತಿಗೆ ಬ್ಲಾಕ್ ಮೇಲ್ ಮಾಡಿ ಅತ್ಯಾಚಾರ ಎಸಗಿರುವ ಆರೋಪ ಕೇಳಿ ಬಂದಿತ್ತು. ಈ ಎರಡು ಪ್ರಕರಣಗಳು ತನಿಖೆಯಲ್ಲಿ ಇರುವಾಗಲೇ ಮತ್ತೊಂದು ಹಳೆ ಪ್ರಕರಣ ಇದೀಗ ತೆರೆದುಕೊಂಡಿದೆ.
ಹೌದು ಧಾರವಾಡ ಜಿಲ್ಲೆಯ ಕೆಲಗೇರಿಯ ಹಿಂದೂ ಯುವತಿಯನ್ನು ವಿವಾಹಿತ ಮುಸ್ಲಿಂ ವ್ಯಕ್ತಿ ಪುಸಲಾಯಿಸಿ ಕರೆದುಕೊಂಡು ಹೋಗಿದ್ದಾನೆ. ಮನೆ ಖರೀದಿಗೆ ನೀಡಿದ್ದ 10 ಲಕ್ಷ ಹಣವನ್ನೂ ವಂಚಿಸಿದ್ದಾನೆ. ಕೆಲಗೇರಿಯ ನಿವಾಸಿ ತಂಗೆಮ್ಮಾ (22) ಎಂಬ ಯುವತಿ ಮನೆ ಎದುರಿನ ನಿವಾಸಿ ಕಾರು ಚಾಲಕನಾಗಿದ್ದ ಮುಸ್ಲಿಂ ವ್ಯಕ್ತಿಯ ಜೊತೆಗೆ ಓಡಿ ಹೋಗಿದ್ದು, ಈ ಬಗ್ಗೆ ಆಕೆಯ ತಾಯಿ ಮಂಜುಳಾ ಅವರೇ ಮಾಹಿತಿ ನೀಡಿದ್ದಾರೆ. ತಮ್ಮ ಮಗಳಿಗೆ ಪರಿಚಿತ ಯುವಕನ ಜೊತೆ ವಿವಾಹವಾಗಿತ್ತು. ಆದ್ರೆ ಮಗಳು ನಮ್ಮ ಜೊತೆಯೇ ಇದ್ದಳು. ಆಕೆಯ ಪತಿ ಆಗಾಗ ಬಂದು ಹೋಗುತ್ತಿದ್ದ. ಧಾರವಾಡದ ಕೆಲಗೇರಿಯಲ್ಲಿ ಬಾಡಿಗೆ ಮನೆಯಲ್ಲಿದ್ದಾಗ, ತಮಗೆ ವಕೀಲರೊಬ್ಬರು ಪರಿಚಯವಿದ್ದರು.
ಅವರ ಕಾರ್ ಡ್ರೈವರ್ ಆಗಿ ಮುನ್ನಾ ಎಂಬಾತ ಕೆಲಸ ಮಾಡ್ತಿದ್ದ. ಆಗ ನಾವು ನಮಗೆ ಸ್ವಂತದೊಂದು ಮನೆ ಮಾಡಬೇಕು. ಹೀಗಾಗಿ ಮನೆ ಹುಡುಕಿ ಕೊಡಿ ಎಂದು ಮುನ್ನಾ ಮತ್ತು ವಕೀಲರಿಗೆ ಹತ್ತು ಲಕ್ಷ ಹಣ ನೀಡಿದ್ದೆವು. ಆ ಬಳಿಕ ವಕೀಲರು ಮತ್ತು ಮುನ್ನಾ ಆಗಾಗ ಮನೆಗೆ ಬಂದು ಹೋಗಿ ಮಾಡುತ್ತಿದ್ದರು. 2023ರಲ್ಲಿ ನಾವು ಮನೆಯಲ್ಲಿ ಇಲ್ಲದ ಸಂದರ್ಭ ಮುನ್ನಾ ತಮ್ಮ ಮಗಳನ್ನು ಪುಸಲಾಯಿಸಿ ಕರೆದುಕೊಂಡು ಹೋಗಿದ್ದಾನೆ. ಈ ಬಗ್ಗೆ ಧಾರವಾಡದ ಸಬ್ ಅರ್ಬನ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದೆವು.
ಆಗ ಪೊಲೀಸರು ಮುನ್ನಾ ವಿರುದ್ದ ದೂರು ದಾಖಲಿಸಿಕೊಳ್ಳದೇ ಕೇವಲ ಮಿಸ್ಸಿಂಗ್ ಕಂಪ್ಲೇಟ್ ದಾಖಲಿಸಿಕೊಂಡಿದ್ದರು. ಈವರೆಗೂ ಪೊಲೀಸರು ಮುನ್ನಾ ಮತ್ತು ತಮ್ಮ ಮಗಳು ಎಲ್ಲಿದ್ದಾರೆ ಎಂದು ಹುಡುಕಿ ಕೊಟ್ಟಿಲ್ಲ ಎಂದು ಆರೋಪಿಸಿದ್ದಾರೆ. ಎರಡು ವರ್ಷಗಳಿಂದ ಮಗಳು ನಾಪತ್ತೆಯಾಗಿದ್ದು, ಈ ಬಗ್ಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ನಾಪತ್ತೆಯಾಗಿರುವ ಯುವತಿಯ ತಾಯಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ಅವರಿಗೆ ದೂರು ನೀಡಿದ್ದಾರೆ.








