ಕಲಬುರಗಿ: ನವೆಂಬರ್ 12ರೊಳಗೆ ಚಿತ್ತಾಪುರದಲ್ಲಿ ರೂಟ್ ಮಾರ್ಚ್ ನಡೆಸುವ ದಿನಾಂಕ ಮತ್ತು ಸಮಯದ ಬಗ್ಗೆ ಮೂಲ ಅರ್ಜಿದಾರರು ಸೇರಿದಂತೆ ಸಂಬಂಧಪಟ್ಟ ಎಲ್ಲ ಸಂಸ್ಥೆಗಳಿಗೆ ಅಂತಿಮಗೊಳಿಸಿ ತಿಳಿಸುವಂತೆ ಕರ್ನಾಟಕ ಹೈಕೋರ್ಟ್ನ ಕಲಬುರಗಿ ಪೀಠ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ನ್ಯಾಯಾಲಯವು ನವೆಂಬರ್ ೧೩ ರಂದು ತನ್ನ ಆದೇಶವನ್ನು ನೀಡಲಿದೆ. ಚಿತ್ತಾಪುರದಲ್ಲಿ ಆರೆಸ್ಸೆಸ್ ರೂಟ್ ಮಾರ್ಚ್ ಗೆ ಅನುಮತಿ ನೀಡಲು ಸರ್ಕಾರ ನಿರಾಕರಿಸಿರುವುದನ್ನು ಪ್ರಶ್ನಿಸಿ ಆರೆಸ್ಸೆಸ್ ಜಿಲ್ಲಾ ಸಂಚಾಲಕ ಅಶೋಕ್ ಪಾಟೀಲ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಜಿ.ಎಸ್.ಕಮಲ್ ಅವರನ್ನೊಳಗೊಂಡ ಏಕಸದಸ್ಯ ಪೀಠ ಈ ಆದೇಶ ನೀಡಿದೆ








