ಬೆಂಗಳೂರು : ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ 3 ಪ್ರಕರಣಗಳು ಕುರಿತಂತೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಇದೀಗ ಕೋರ್ಟ್ ಅದರಲ್ಲಿ ಎರಡು ಪ್ರಕರಣಗಳ ವಿಚಾರಣೆಯನ್ನು ಜೂನ್ 7 ಕ್ಕೆ ಮುಂದೂಡಿದೆ.
ಹೌದು ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಅವರು ಅತ್ಯಾಚಾರ ಪ್ರಕರಣಗಳಲ್ಲಿ ನಿರೀಕ್ಷಿಣಾ ಜಾಮೀನು ಕೋರಿ ಸಂಸದ ಪ್ರಜ್ವಲ್ ರೇವಣ್ಣ ಅರ್ಜಿ ಸಲ್ಲಿಸಿದ್ದರು. ಇದೀಗ ಎರಡು ಪ್ರಕರಣಗಳ ವಿಚಾರಣೆಯನ್ನು ಇದೀಗ ಕೋರ್ಟ್ ಜೂನ್ 7ಕ್ಕೆ ಮುಂದೂಡಿದೆ ಎಂದು ಹೇಳಲಾಗುತ್ತಿದೆ.
ಹೊಳೆನರಸೀಪುರ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಒಂದು ಕೇಸ್ನಲ್ಲಿ ಮಾತ್ರ ಎಸ್ಐಟಿ ಪ್ರಜ್ವಲ್ ಅವರನ್ನು ವಶಕ್ಕೆ ಪಡೆದಿದ್ದಾರೆ. ಉಳಿದೆರಡು ಪ್ರಕರಣಗಳಲ್ಲಿ ಈವರೆಗೂ ಪ್ರಜ್ವಲ್ ಬಂಧಿಸದ ಹಿನ್ನೆಲೆಯಲ್ಲಿ ಈ ಅರ್ಜಿಗಳಿಗೆ ಆಕ್ಷೇಪಣೆ ಸಲ್ಲಿಸಲು ಎಸ್ಐಟಿ ಕಾಲಾವಕಾಶ ಕೋರಿದೆ ಹೀಗಾಗಿ ನ್ಯಾಯಾಲಯ ವಿಚಾರಣೆಯನ್ನು ಜೂ.7ಕ್ಕೆ ಮುಂದೂಡಿದೆ.
ಹೌದು ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಅವರು ತಮ್ಮ ವಕೀಲರ ಮೂಲಕ ಇದೀಗ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದರು.
ಮೂರು ಪ್ರಕರಣಗಳಲ್ಲಿ ನಿರೀಕ್ಷಣ ಜಾಮೀನುಗೆ ಅರ್ಜಿ ಸಲ್ಲಿಸಿದ್ದಾರೆ. ಸಿಐಡಿ ಠಾಣೆ ಕ್ರೈಂ ನಂಬರ್ 20/2024 ಸೈಬರ್ ಕ್ರೈಂ ಠಾಣೆ ಕ್ರೈಂ ನಂಬರ್ 2/ 2024 ಹಾಗೂ ಹೊಳೆನರಸೀಪುರ ಠಾಣೆ ಕ್ರೈಂ ನಂಬರ್ 107/ 2024 ಸೇರಿದಂತೆ ಮೂರು ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.