ಚಿಕ್ಕಬಳ್ಳಾಪುರ : ಪ್ರವಾಸಿಗರ ಅಚ್ಚು ಮೆಚ್ಚಿನ ತಾಣವಾದ ನಂದಿ ಹಿಲ್ಸ್ ಎಂದೇ ಪ್ರಸಿದ್ಧವಾಗಿರುವ ನಂದಿ ಗಿರಿಧಾಮ ನಾಳೆಯಿಂದ 1 ತಿಂಗಳವರೆಗೆ ಅಂದರೆ ನಾಳೆಯಿಂದ ಮಾರ್ಚ್ 24 ರವರೆಗೆ ವರೆಗೆ 1 ತಿಂಗಳ ಕಾಲ ವಿಶ್ವವಿಖ್ಯಾತ ಪ್ರವಾಸಿತಾಣ ನಂದಿಗಿರಿಧಾಮ ಬಂದ್ ಇರಲಿದೆ.ಕಾರಣ ನಂದಿಗಿರಿಧಾಮದ ರಸ್ತೆ ನವೀಕರಣ ಕಾಮಗಾರಿ ಹಿನ್ನಲೆಯಲ್ಲಿ 1 ತಿಂಗಳು ನಂದಿಬೆಟ್ಟದ ರಸ್ತೆಯಲ್ಲಿ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ಆದೇಶ ಹೊರಡಿಸಿದ್ದಾರೆ.
ಹೌದು ನಂದಿಗಿರಿಧಾಮದ ಅಂಕು ಡೊಂಕಿನ ರಸ್ತೆಗೆ ಡಾಂಬರೀಕರಣ ಮಾಡುವ ಸಲುವಾಗಿ ಮಾರ್ಚ್ 24 ರಿಂದ ಏಪ್ರಿಲ್ 25 ರವರೆಗೂ ಬರೋಬ್ಬರಿ 1 ತಿಂಗಳ ಕಾಲ ರಸ್ತೆಯಲ್ಲಿ ವಾಹನಗಳ ಸಂಚಾರಕ್ಕೆ ಬ್ರೇಕ್ ಹಾಕಲಾಗುತ್ತಿದೆ. ಆದ್ರೆ ಪ್ರವಾಸಿಗರ ಹಿತದೃಷ್ಟಿಯಿಂದ ವೀಕೆಂಡ್ ಶುಕ್ರವಾರ ಸಂಜೆ 6-30 ರಿಂದ ಸೋಮವಾರ ಬೆಳಿಗ್ಗೆ 8 ಗಂಟೆಯವರೆಗೆ ಮಾತ್ರ ಪ್ರವಾಸಿಗರ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ.
ವೀಕೆಂಡ್ ನಲ್ಲಿ ಮಾತ್ರ ಅವಕಾಶ
ವಾರಾಂತ್ಯದ ದಿನಗಳಲ್ಲಿ ಶುಕ್ರವಾರ ಸಂಜೆ 6:30ರಿಂದ ಸೋಮವಾರ ಬೆಳಿಗ್ಗೆ 08 ಗಂಟೆ ವರೆಗೆ ಮಾತ್ರ ವಾಹನಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ. ಉಳಿದಂತೆ ವಾರದ ಐದೂ ದಿನಗಳು ವಾಹನಗಳ ಸಂಚಾರಕ್ಕೆ ಸಂಪೂರ್ಣ ನಿರ್ಬಂಧ ವಿಧಿಸಲಾಗಿದೆ. ಮಾರ್ಚ್ 24 ರಿಂದ ಏಪ್ರಿಲ್ 25ರ ವರೆಗೂ 1 ತಿಂಗಳು 4 ವಾರಗಳ ಕಾಲ ನಿರ್ಬಂಧ ಇರಲಿದೆ. ನಂದಿಬೆಟ್ಟದ ತಪ್ಪಲಿನಿಂದ ಬೆಟ್ಟದವರೆಗೂ 7.70 ಕಿಲೋಮೀಟರ್ ದೂರದ ರಸ್ತೆ ಕಾಮಗಾರಿ ನಡೆಯಲಿದೆ.
ಚಿಕ್ಕಬಳ್ಳಾಪುರ ತಾಲೂಕಿನ ನಂದಿಬೆಟ್ಟದ ತಪ್ಪಲು ಬೆಟ್ಟದ ಕ್ರಾಸ್ ನಿಂದ ಬೆಟ್ಟದ ಮೇಲ್ಬಾಗದವರೆಗೂ ಸರಿಸುಮಾರು 7 ಮುಕ್ಕಾಲು ಕಿಲೋಮೀಟರ್ ದೂರದ ಅಂಕುಡೊಂಕಿನ ರಸ್ತೆಗೆ ಅಲ್ಲಲ್ಲಿ ಹಾಳಾಗಿದೆ. ಹೀಗಾಗಿ ರಸ್ತೆಗೆ ಸಂಪೂರ್ಣವಾಗಿ ಮರು ಡಾಂಬರೀಕರಣ ಮಾಡಬೇಕಾಗಿದೆ. ಆದ್ದರಿಂದ ಮುಂಜಾಗ್ರತಾ ಕ್ರಮವಾಗಿ ವಾರದಲ್ಲಿ 5 ದಿನಗಳ ಕಾಲ ಸೋಮವಾರ, ಮಂಗಳವಾರ, ಬುಧವಾರ, ಗುರುವಾರ ಹಾಗೂ ಶುಕ್ರವಾರ ವಾಹನಗಳ ಸಂಚಾರ ಬಂದ್ ಮಾಡಲಾಗುತ್ತಿದೆ.