ಬಾಗಲಕೋಟೆ : ಬೆಳ್ಳಂಬೆಳಗ್ಗೆ ಭೀಕರವಾದ ಅಪಘಾತ ನಡೆದಿದ್ದು ಟ್ಯಾಕ್ಟರ್ ಗೆ ಕಾರು ಡಿಕ್ಕಿಯಾಗಿ ನಾಲ್ವರು ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಅನಗವಾಡಿ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ.
ಹುಬ್ಬಳ್ಳಿ ವಿಜಯಪುರ ರಾಷ್ಟ್ರೀಯ ಹೆದ್ದಾರಿಯಲಿ ಈ ಅಪಘಾತ ಸಂಭವಿಸಿದೆ. ನಿಂತಿದ್ದ ಟ್ರ್ಯಾಕ್ಟರ್ ಗೆ ಹೆಮ್ಮೆಯಿಂದ ವೇಗವಾಗಿ ಬಂದಂತಹ ಕಾರು ಡಿಕ್ಕಿ ಹೊಡೆದ ಪರಿಣಾಮವಾಗಿ ಓರ್ವ ಮಹಿಳೆ ಸೇರಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ನಸುಕಿನ ಜಾವದಲ್ಲಿ ರಸ್ತೆ ಬದಿಯಲ್ಲಿ ನಿಂತಿದ್ದ ಟ್ಯಾಕ್ಟರ್ ಗೆ ಹಿಂದಿನಿಂದ ಬಂದ ಕಾರೊಂದು ವೇಗವಾಗಿ ಬಂದು ಗುದ್ದಿದ ಪರಿಣಾಮವಾಗಿ ಮಹಿಳೆ ಸೇರಿದಂತೆ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಬೀಳಗಿ ಪೊಲೀಸ್ ಠಾಣಗತ್ತಿಯಲ್ಲಿ ನಡೆದ ಪ್ರಕರಣವಾಗಿದೆ.ಮೃತರ ಕುರಿತಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನ ನಡೆಸುತ್ತಿದ್ದು, ಘಟನೆ ಕುರಿತಂತೆ ಬೀಳಗಿ ತಾಲೂಕು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ