ಬೆಂಗಳೂರು : ಬಿಟ್ ಕಾಯಿನ್ ಕೇಸ್ನಲ್ಲಿ ಆರೋಪಿಗಳಿಗೆ ಸಹಾಯ ಆರೋಪದ ಹಿನ್ನೆಲೆಯಲ್ಲಿ ಡಿ ವೈ ಎಸ್ ಪಿ ಶ್ರೀಧರ್ ಕೆಗೆ ಇದೀಗ ಹೈಕೋರ್ಟ್ ರಿಲೀಫ್ ನೀಡಿದ್ದು, ಘೋಷಿತ ಆರೋಪಿ ಆದೇಶವನ್ನು ಇದೀಗ ಹೈಕೋರ್ಟ್ ರದ್ದುಪಡಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಸಹಕರಿಸದೆ ತಲೆ ಮರೆಸಿಕೊಂಡ ಹಿನ್ನೆಲೆಯಲ್ಲಿ ವಿಚಾರಣಾ ನ್ಯಾಯಾಲಯದಿಂದ ಘೋಷಿತ ಆರೋಪಿ ಎಂದು ವಾರೆಂಟ್ ಜಾರಿ ಮಾಡಲಾಗಿತ್ತು. ವಾರೆಂಟ ಪ್ರಶ್ನೆಸಿ ಶ್ರೀಧರ್ ಕೆ ಪೂಜಾರ್ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದರು. ಆರೋಪಿ ತನಿಖೆಗೆ ಸಹಕರಿಸುವುದಾಗಿ ಹಿರಿಯ ವಕೀಲ ಅರುಣ್ ಶ್ಯಾಮ್ ಭರವಸೆ ನೀಡಿದ್ದಾರೆ.
ಮೇ 8 ರಂದು ಬೆಳಿಗ್ಗೆ 9:00ಗೆ ತನಿಖಾಧಿಕಾರಿಗಳ ಮುಂದೆ ಹಾಜರಾಗಬೇಕು. ಬೆಳಿಗ್ಗೆ 9:00 ರಿಂದ ಸಂಜೆ ಆರರವರೆಗೆ ಕಸ್ಟಡಿಗೆ ಪಡೆದು ತನಿಖೆ ನಡೆಸಬೇಕು. ನಂತರ 2,00,000 ಬಾಂಡ್ ಪಡೆದು ಬಿಡುಗಡೆ ಮಾಡಬೇಕು. ಪೊಲೀಸರ ತನಿಖೆಗೆ ಆರೋಪಿ ಶ್ರೀಧರ ಕೆ ಪೂಜಾರ್ ಸಹಕರಿಸಬೇಕು.ಜಾಮೀನು ಅರ್ಜಿ ಸಲ್ಲಿಸಿದರೆ ಪೊಲೀಸರು ಆಕ್ಷೇಪಿಸಬಾರದು ಹೈಕೋರ್ಟ್ ಪೀಠ ಆದೇಶಿಸಿದೆ.