ಬೆಂಗಳೂರು :ಬೆಂಗಳೂರಿನ ಅಬಕಾರಿ ಕಚೇರಿಗಳ ಮೇಲೆ ಇಂದು ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು, ಪರಿಶೀಲನೆಗೆ ಲೋಕಾಯುಕ್ತ ನ್ಯಾಯಮೂರ್ತಿ.ಬಿ.ಎಸ್ ಪಾಟೀಲ್ ವಾರಂಟ್ ಜಾರಿ ಮಾಡಿದ್ದಾರೆ. ಇದರ ಬೆನ್ನಲ್ಲೇ ಬೆಂಗಳೂರಿನ ಅಬಕಾರಿ ಇಲಾಖೆ ಕಚೇರಿಗಳ ಲೋಕಾಯುಕ್ತ ದಾಳಿ ಮಾಡಿದ್ದು, ಈ ವೇಳೆ ಸರ್ಕಾರಿ ಕಚೇರಿಯಲ್ಲಿ ಗಾಂಜಾ, ಲಿಕ್ಕರ್ ಬಾಟಲ್ ಪತ್ತೆಯಾಗಿವೆ.
ಹೌದು ಅ ಬಕಾರಿ ಕಚೇರಿಗಳ ಮೇಲೆ ಇಂದು ಲೋಕಾಯುಕ್ತ ದಾಳಿ ಮಾಡಿದ್ದು, ಯಶವಂತಪುರ ಮತ್ತು ಬ್ಯಾಟರಾಯನಪುರ ಅಬಕಾರಿ ಕಚೇರಿಗಳಲ್ಲಿ ಖುದ್ದು ಪರಿಶೀಲನೆಗೆ ಲೋಕಾಯುಕ್ತ ನ್ಯಾಯಮೂರ್ತಿ. ಬಿ.ಎಸ್ ಪಾಟೀಲ್ ಅವರು ಸರ್ಚ್ ವಾರಂಟ್‌ಗಳನ್ನು ಹೊರಡಿಸಿದ್ದರು. ಯಶವಂತಪುರ ಮತ್ತು ಬ್ಯಾಟರಾಯನಪುರ ಅಬಕಾರಿ ಕಚೇರಿಗಳಲ್ಲಿ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಖುದ್ದು ಪರಿಶೀಲನೆಗೆ ವಾರೆಂಟ್ ಹೊರಡಿಸಲಾಗಿತ್ತು.
ಅದರಂತೆ ಸಂಜೆ ವೇಳೆ ಯಶವಂತಪುರ ಮತ್ತು ಬ್ಯಾಟರಾಯನಪುರ ಅಬಕಾರಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ಮಾಡಿದ್ದು, ಈ ವೇಳೆ ಸರ್ಕಾರಿ ಕಚೇರಿಗಳಲ್ಲೇ ಗಾಂಜಾ ಮತ್ತು ಮದ್ಯದ ಬಾಟಲಿಗಳು ಪತ್ತೆಯಾಗಿವೆ. ಸರ್ಕಾರಿ ಕಚೇರಿಯಲ್ಲಿ ಗಾಂಜಾ, ಲಿಕ್ಕರ್ ಬಾಟಲ್ ಪತ್ತೆಯಾಗಿವೆ. ಯಶವಂತಪುರ, ಬ್ಯಾಟರಾಯನಪುರ ಕಚೇರಿಗಳಲ್ಲಿ ಸಿಗರೇಟ್ನ ತಂಬಾಕು ತೆಗೆದು ಗಾಂಜಾ ತುಂಬಿಟ್ಟಿದ್ದು ಪತ್ತೆಯಾಗಿದ್ದು, ಲೋಕಾಯುಕ್ತ ನ್ಯಾಯಮೂರ್ತಿ ಬಿಎಸ್ ಪಾಟೀಲ್, ಉಪಲೋಕಾಯುಕ್ತ ಬಿ. ವೀರಪ್ಪ ಪರಿಶೀಲನೆ ನಡೆಸಿದ್ದಾರೆ.