ಬೆಂಗಳೂರು : ಕಳೆದ ತಿಂಗಳವೆ ಬೆಂಗಳೂರು ವಿಶ್ವವಿದ್ಯಾಲಯದ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿಗಳಿಗೆ ಬಳಸುವ ಊಟದಲ್ಲಿ ಹುಳುಪತ್ತಿಯಾಗಿದ್ದು ಇದೀಗ ಮತ್ತೆ ಅಂತ ಘಟನೆ ಮರುಕಳಿಸಿದ್ದು ಮತ್ತೆ ಊಟದಲ್ಲಿ ಹುಳುಗಳು ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ ಇದನ್ನು ವಿದ್ಯಾರ್ಥಿಗಳು ಕವನ ಬರೆಯುವ ಮೂಲಕ ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ.
ಬೆಂಗಳೂರು ವಿಶ್ವವಿದ್ಯಾಲಯದ ವಸತಿ ಶಾಲೆಯ ಊಟದಲ್ಲಿ ಹುಳಗಳು ಪತ್ತೆಯಾಗಿವೆ. ಕಳಪೆ ಆಹಾರ ತಿಂದು ವಿದ್ಯಾರ್ಥಿಗಳ ಆರೋಗ್ಯ ಏರುಪೇರಾಗಿದ್ದು, ಊಟದಲ್ಲಿ ಹುಳ ಇದೆ ಎಂದರೆ ಅಡ್ಜೆಸ್ಟ್ ಮಾಡಿ ಎಂಬ ಅಸಡ್ಡೆಯ ಉತ್ತರ ನೀಡುತ್ತಿದ್ದಾರೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಇದರಿಂದ ಬೇಸತ್ತ ವಿದ್ಯಾರ್ಥಿಗಳು ಕಟ್ಟುಪಾಡು ಬದಲಾಗದು ಎಂಬ ಶೀರ್ಷಿಕೆಯಡಿ ಕವನ ಬರೆದಿದ್ದು, ಬದಲಿಸಲು ಮುಂದೆ ಬಂದರೆ ಎತ್ತಂಗಡಿ ಕಟ್ಟಿಟ್ಟ ಬುತ್ತಿ ಎಂದು ಕವನದಲ್ಲಿ ಉಲ್ಲೇಖಿಸಲಾಗಿದೆ.
ಹಾಸ್ಟೆಲ್ ವಾರ್ಡನ್ ನಿರ್ಲಕ್ಷ್ಯ ಮಾಡುತ್ತಿದ್ದು, ಉತ್ತಮ ಊಟ ನೀಡುತ್ತಿಲ್ಲ. ಇದನ್ನು ಪ್ರಶ್ನಿಸಿದರೆ ದಬ್ಬಾಳಿಕೆ ಮಾಡುತ್ತಾರೆ. ಗೊತ್ತಿಲ್ಲದೆ ಊಟದಲ್ಲಿ ಹುಳಗಳು ತಿಂದು ಆರೋಗ್ಯದಲ್ಲಿ ಏರುಪೇರಾಗಿದ್ದು, ಇಂತಹ ಆಹಾರ ತಿಂದು ಜೀವಕ್ಕೆ ಅಪಾಯವಾದರೆ ಯಾರು ಹೊಣೆ ಎಂದು ಆಕ್ರೋಶ ಹೊರಹಾಕಿದ್ದರು.
ಇದೇ ಹಾಸ್ಟೆಲ್ನಲ್ಲಿ 2023ರ ನವೆಂಬರ್ ತಿಂಗಳಲ್ಲಿ ಊಟದಲ್ಲಿ ಹುಳಗಳು ಪತ್ತೆಯಾಗಿದ್ದವು. ಕಳಪೆ ಆಹಾರ ನೀಡುತ್ತಿರುವುದರಿಂದ ಕೆರಳಿದ ವಿದ್ಯಾರ್ಥಿಗಳು ನೂರಾರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ದರು. ವಸತಿ ಶಾಲೆಯಲ್ಲಿ ಮೂಲಭೂತ ಸೌಕರ್ಯಗಳನ್ನು ನೀಡುತ್ತಿಲ್ಲ. ಊಟ, ನೀರು ಸರಿಯಿಲ್ಲ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದರು.