ಬೆಳಗಾವಿ: ಬೆಳಗಾವಿಯ ಸುವರ್ಣ ಸೌಧದಲ್ಲಿ ಇಂದಿನಿಂದ ವಿಧಾನಮಂಡಲ ಚಳಿಗಾಲದ ಅದಿವೇಶನ ಆರಂಭವಾಗಿದ್ದು, ಮಹಾಮೇಳಾವ್ ನಡೆಸಲು ಮುಂದಾಗಿದ್ದ ನಾಡದ್ರೋಹಿ ಎಂಇಎಸ್ ಪುಂಡರನ್ನು ಬೆಳಗಾವಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇಂದು ಎಂಇಎಸ್ ಕಾರ್ಯಕರ್ತರು ಬೆಳಗಾವಿಯಲ್ಲಿ ಮಹಾಮೇಳಾವ್ ನಡೆಸಲು ಧರ್ಮವೀರ ಸಂಭಾಜಿ ವೃತ್ತದತ್ತ ಆಗಮಿಸುತ್ತಿದ್ದರು. ನಿಷೇಧದ ನಡುವೆಯೂ ಮಹಾಮೇಳಾವ್ ಗೆ ಎಂಇಎಸ್ ಮುಂದಾಗಿದ್ದ ಹಿನ್ನೆಲೆಯಲ್ಲಿ ಬೆಳಗಾವಿ ಪೊಲೀಸರು ಎಂಇಎಸ್ ನಾಯಕರಾದ ಮನೋಹರ ಕಿಣೇಕರ, ಆರ್ ಎಂ. ಪಾಟೀಲ್, ಪ್ರಕಾಶ ಶಿರೋಲಕರ್, ಪ್ರಕಾಶ ಮರ್ಕಾಳೆ ಸೇರಿ 20ಕ್ಕೂ ಹೆಚ್ಚು ನಾಯಕರನ್ನು ವಶಕ್ಕೆ ಪಡೆದುಕೊಂಡಿದೆ.
ಬೆಳಗಾವಿಯಲ್ಲಿ ಅಧಿವೇಶನದ ವೇಳೆ ಎಂಇಎಸ್ ಮಹಾಮೇಳಾವ್ ಗೆ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಅವಕಾಶ ನೀಡಿಲ್ಲ. ಎಂಇಎಸ್ ಕಾರ್ಯಕರ್ತರು ಸಂಭಾಜಿ ವೃತ್ತಕ್ಕೆ ಆಗಮಿಸುತ್ತಿದ್ದಂತೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.