ಬೆಳಗಾವಿ: ಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತವಾಗಿದ್ದು ಕಾರು ಮರಕ್ಕೆ ಹೊಡೆದ ಪರಿಣಾಮ ಘಟನೆಯಲ್ಲಿ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಬೆಳಗಾವಿ ಜಿಲ್ಲೆ ನಂಧಗಡದ ಬಳಿ ಈ ಘಟನೆ ನಡೆದಿದೆ ಎನ್ನಲಾಗಿದೆ.
ಕಾರಿನಲ್ಲಿದ್ದವರು ಮದುವೆ ಕಾರ್ಯಕ್ರಮ ಮುಗಿಸಿಕೊಂಡು ತಮ್ಮ ಊರಿನ ಕಡೆಗೆ ತೆರಳುತ್ತಿದ್ದರು ಎನ್ನಲಾಗಿದೆ. ಘಟನೆಯಲ್ಲಿ ಕಾರಿನಲ್ಲಿ ಒಂಬತ್ತು ಮಂದಿ ಪ್ರಯಾಣ ಮಾಡುತ್ತಿದ್ದರು ಎನ್ನಲಾಗಿದೆ. ಸಾವನ್ನಪ್ಪಿದ್ದವರನ್ನು ಮಹಾರಾಸ್ಟ್ರದ ಮೂಲದವರು ಎನ್ನಲಾಗಿದೆ. ಘಟನ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದರು, ಗಾಯಗೊಂಡಿರುವವರನ್ನು ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ ಎನ್ನಲಾಗಿದೆ.