ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದ ನಿವೇಶನ ಹಂಚಿಕೆ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾತ್ರವಿದೆ ಎಂದು ನೀಡಿದ ಬೆನ್ನಲ್ಲಿಯೇ ರಾಜ್ಯಪಾಲರಿಂದ ಪ್ರಾಸಿಕ್ಯೂಷನ್ ನೋಟಿಸ್ ಜಾರಿ ಮಾಡಲಾಗಿತ್ತು.ಹಾಗಾಗಿ ಇಂದು ನಡೆದ ಸಂಪುಟ ಸಭೆಯಲ್ಲಿ ಸಿದ್ದರಾಮಯ್ಯ ಹೊರಗೆ ಉಳಿದಿದ್ದು ಸಚಿವ ಸಂಪುಟ ಸಭೆಯಲ್ಲಿ ರಾಜ್ಯಪಾಲರ ನೋಟಿಸ್ ವಾಪಾಸ್ ಪಡೆಯಬೇಕು ಎಂದು ನಿರ್ಧರಿಸಲಾಯಿತು.
ಇಂದು ಸಿಎಂ ಸಿದ್ದರಾಮಯ್ಯ ಅವರ ಅನುಪಸ್ಥಿತಿಯಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಸಂಪುಟ ಸಭೆ ನಡೆಯಿತು ಈ ಒಂದು ಸಭೆಯಲ್ಲಿ, ರಾಜ್ಯಪಾಲರ ನೊಟೀಸ್‌ಗೆ ಕಾನೂನು ಮೂಲಕ ಉತ್ತರ ನೀಡುವುದಕ್ಕೆ ನಿರ್ಧರಿಸಲಾಗಿದೆ. ಜೊತೆಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೀಡಲಾಗಿರುವ ನೊಟೀಸ್ ಅನ್ನು ವಾಪಸ್ ಪಡೆಯುವಂತೆಯೂ ಒತ್ತಾಯೊಸುವ ಬಗ್ಗೆ ನಿರ್ಣಯ ಕೈಗೊಳ್ಳಲಾಗಿದೆ.
ಇನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ನೊಟೀಸ್ ನಲ್ಲಿ ಬಳಸಿದ ಪದ ಮತ್ತು ಒಕ್ಕಣಿಕೆಗೆ ಆಕ್ಷೇಪ ವ್ಯಕ್ತಪಡಿಸಲಾಗಿದೆ. ಪದ ಮತ್ತು ಒಕ್ಕಣಿಕೆ ಸಹಿತ ನೊಟೀಸ್ ವಾಪಸ್ ಪಡೆಯಲು ಸಂಪುಟ ನಿರ್ಣಯ ಕೈಗೊಳ್ಳಲಾಗಿದೆ. ಒಂದು ವೇಳೆ ನೊಟೀಸ್ ವಾಪಸ್ ಪಡೆಯದಿದ್ದರೆ ಕಾನೂನು ಹೋರಾಟ ನಡೆಸಲು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ ಎಂಬ ಮಾಹಿತಿ ತಿಳಿದುಬಂದಿದೆ.