ಮೈಸೂರು : ಲೋಕಸಭಾ ಚುನಾವಣೆ ಸಂದರ್ಭದಲ್ಲೇ ಜೆಡಿಎಸ್ ಪಕ್ಷಕ್ಕೆ ಬಿಗ್ ಶಾಕ್ ಎದುರಾಗಿದೆ. ಹೌದು ಕಳೆದ ವಿಧಾನಸಭಾ ಚುನಾವಣೆಯಲ್ಲಿ ವರುಣ ಕ್ಷೇತ್ರದಿಂದ ಜೆಡಿಎಸ್ ಪಕ್ಷದಿಂದ ಸ್ಪರ್ಧಿಸಿದ್ದ ಭಾರತಿ ಶಂಕರ್ ಇಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಯಾದರು.
ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಮೈಸೂರು ಜಿಲ್ಲೆಯ ವರುಣಾ ವಿಧಾನಸಭಾ ಕ್ಷೇತ್ರದ ಬಿಳಿಗೆರೆ ಕಾಂಗ್ರೆಸ್ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸೇರ್ಪಡೆಗೊಂಡರು. ಈ ವೇಳೆ ಕಾಂಗ್ರೆಸ್ ಬಾವುಟ ನೀಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾರತೀ ಶಂಕರ್ ರನ್ನು ಪಕ್ಷಕ್ಕೆ ಬರಮಾಡಿಕೊಂಡರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಭಾರತಿ ಶಂಕರ್ ವರುಣ ಕ್ಷೇತ್ರದಿಂದ ಜೆಡಿಎಸ್ ಪಕ್ಷದಿಂದ ಸ್ಪರ್ಧಿಸಿದರು.
ಕೆ.ಪಿ ಬಚ್ಚೇಗೌಡ ಕಾಂಗ್ರೆಸ್ ಸೇರ್ಪಡೆ
ಇನ್ನೂ ನಿನ್ನೆ ಲೋಕಸಭಾ ಚುನಾವಣೆ ಸಂದರ್ಭದಲ್ಲೇ ಜೆಡಿಎಸ್ ಪಕ್ಷಕ್ಕೆ ಬಿಗ್ ಶಾಕ್ ಎದುರಾಗಿದೆ. ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಪರಮಾಪ್ತ, ಮಾಜಿ ಶಾಸಕ ಕೆ.ಪಿ ಬಚ್ಚೇಗೌಡ ಅವರು ಜೆಡಿಎಸ್ ತೊರೆದು, ಸಿಎಂ ಸಿದ್ಧರಾಮಯ್ಯ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ.
ಬೆಂಗಳೂರಿನ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನಿವಾಸದಲ್ಲಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರ ಪರಮಾಪ್ತ, ಕೆಪಿ ಬಚ್ಚೇಗೌಡ ಅವರು ಜೆಡಿಎಸ್ ಪಕ್ಷ ತೊರೆದು, ಕಾಂಗ್ರೆಸ್ ಪಕ್ಷವನ್ನು ಸಾಂಕೇತಿಕವಾಗಿ ಸೇರ್ಪಡೆಯಾಗಿದ್ದಾರೆ.ಚಿಕ್ಕಬಳ್ಳಾಪುರದ ಜೆಡಿಎಸ್ ಮಾಜಿ ಶಾಸಕರಾಗಿರುವಂತ ಕೆ.ಪಿ ಬಚ್ಚೇಗೌಡ ಅವರು, ಏಪ್ರಿಲ್.2ರಂದು ಅಧಿಕೃತವಾಗಿ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಗೊಳ್ಳಲಿದ್ದಾರೆ.