ಬೆಂಗಳೂರು : ದೇಶಾದ್ಯಂತ ಸುಧೀರ್ಘ ಏಳು ಹಂತಗಳಲ್ಲಿ ನಡೆದ ಲೋಕಸಭೆ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದೆ. ಇಂದು ಬೆಳಗ್ಗೆ 8 ಗಂಟೆಯಿಂದ 543 ಲೋಕಸಭಾ ಕ್ಷೇತ್ರಗಳ ಮತ ಎಣಿಕೆ ಆರಂಭವಾಗಿದ್ದು, 8,360 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.
ಬೆಂಗಳೂರು ದಕ್ಷಿಣದಲ್ಲಿ ನಾಲ್ಕನೇ ಸುತ್ತಿನಲ್ಲಿಯೂ ತೇಜಸ್ವಿ ಸೂರ್ಯ ಮುನ್ನಡೆ ಸಾಧಿಸಿದ್ದಾರೆ. ತೇಜಸ್ವಿ ಸೂರ್ಯ 50 ಸಾವಿರಕ್ಕೂ ಹೆಚ್ಚು ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ. ತೇಜಸ್ವಿ ಸೂರ್ಯ 92,840 ಮತಗಳನ್ನು ಪಡೆದುಕೊಂಡಿದ್ದರೆ, ಸೌಮ್ಯ ರೆಡ್ಡಿ 38,914 ಮತಗಳನ್ನು ಪಡೆದಿದ್ದಾರೆ.
ರಾಯ್ಬರೇಲಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭರ್ಜರಿ ಮುನ್ನಡೆ ಸಾಧಿಸಿದ್ದು, 18 ಸಾವಿರ ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ. ಬಿಜೆಪಿ ಅಭ್ಯರ್ಥಿಗೆ ರಾಹುಲ್ ಗಾಂಧಿ ವಿರುದ್ಧ ಹಿನ್ನಡೆಯಾಗಿದೆ.
ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಬಿಜೆಪಿ ಅಭ್ಯರ್ಥಿ ಯದುವೀರ್ಗೆ 1,64,337 ಮತಗಳನ್ನು ಪಡೆದ್ರೆ. ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್ 128,870 ಮತಗಳನ್ನು ಪಡೆದಿದ್ದು ಯದುವೀರ್ 35467 ಮತಗಳ ಮುನ್ನಡೆ ಸಾಧಿಸಿದ್ದಾರೆ.
ಇನ್ನು , ವಾರಣಾಸಿ ಲೋಕಸಭಾ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಆರಂಭಿಕ ಹಿನ್ನಡೆ ಅನುಭವಿಸಿದ್ದಾರೆ. 6223 ಮತಗಳಿಂದ ಹಿನ್ನಡೆ ಅನುಭವಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ ಅವರು 141,752 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ 91,286 ಮತಗಳನ್ನು ಪಡೆದಿದ್ದು 50,466 ಮತಗಳ ಅಂತರದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ.
ಈವರೆಗೆ ನಡೆದ ಮತ ಎಣಿಕೆಯಲ್ಲಿ ಎನ್ಡಿಎ 282 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ರೆ, ಇಂಡಿಯಾ ಒಕ್ಕೂಟಕ್ಕೆ 226 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಹಾಗೆಯೇ ಸ್ವತಂತ್ರ ಅಭ್ಯರ್ಥಿಗಳು 25 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಕರ್ನಾಟಕದ 15 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ರೆ ಕಾಂಗ್ರೆಸ್ ಆರು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.