ಬೆಂಗಳೂರು : ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನಲ್ಲಿ ಬಿಜೆಪಿ ಕಾರ್ಯಕರ್ತ ಪ್ರವೀಣ್ ಗೌಡ ಬೇಲೂರು ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಪ್ರವೀಣ್ ಆತ್ಮಹತ್ಯೆ ಮಾಡಿಕೊಳ್ಳೋಕು ಮುನ್ನ ಡೆತ್ ನೋಟ್ ಅಲ್ಲಿ ಉಲ್ಲೇಖಿಸಿದ ಇಬ್ಬರು ಆರೋಪಿಗಳನ್ನು ಆನೇಕಲ್ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಪ್ರಕರಣದ A1 ಆರೋಪಿ ಕಿರಣಗೌಡ ಮತ್ತು A3 ಹರೀಶ್ ನನ್ನು ಪೊಲೀಸರು ಬಂಧಿಸಿದ್ದಾರೆ. ಮೃತ ಪ್ರವೀಣ್ ಗೌಡನ ಮತ್ತೊಂದು ವಿಡಿಯೋ ವೈರಲ್ ಆಗಿದ್ದು, ಪ್ರಕರಣದ ಪ್ರಮುಖ ಆರೋಪಿಗಳಿಂದ ಪ್ರವೀಣ್ ವಿಡಿಯೋ ವೈರಲ್ ಆಗಿದೆ. ಆನೇಕಲ್ ಮಂಡಲ ಬಿಜೆಪಿ ಅಧ್ಯಕ್ಷ ಮುನಿರಾಜುಗೌಡ ಆನೇಕಲ್ ಪುರಸಭೆ ಸದಸ್ಯೆ ಭಾಗ್ಯಲಕ್ಷ್ಮಿ ಮತ್ತು ಪತಿ ಶ್ರೀನಿವಾಸ್ ಅವರಿಂದ ವಿಡಿಯೋ ವೈರಲ್ ಆಗಿದೆ.
ಪ್ರಕರಣ ಹಿನ್ನೆಲೆ?
ನಿನ್ನೆ ಆನೇಕಲ್ ನ ಎಸ್.ವಿ.ಎಂ ಸ್ಕೂಲ್ ಬಳಿ ಬಿಜೆಪಿ ಕಾರ್ಯಕರ್ತ ಪ್ರವೀಣ್ ಗೌಡ ಬೇಲೂರು (35) ಎಂಬುವವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಫೇಸ್ಬುಕ್ ವಿಡಿಯೋ ಮಾಡಿ ಹಲವರ ಹೆಸರುಗಳನ್ನು ಪ್ರಸ್ತಾಪಿಸಿರುವ ಪ್ರವೀಣ್, ಮರಕ್ಕೆ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ.
ಬಿಜೆಪಿ ನಾಯಕರಿಂದ ಕಿರುಕುಳ?
ಪ್ರವೀಣ್ ಗೌಡ ತಮ್ಮ ಫೇಸ್ ಬುಕ್ ವಿಡಿಯೋದಲ್ಲಿ ಹಲವರ ಮೇಲೆ ವಂಚನೆ ಮತ್ತು ಹಲ್ಲೆ ಆರೋಪ ಹೊರಿಸಿದ್ದು, ಬಿಜೆಪಿ ಮಂಡಲ ಅಧ್ಯಕ್ಷ ಮುನಿರಾಜುಗೌಡ ಹಾಗೂ ಕೌನ್ಸಿಲರ್ ಭಾಗ್ಯಮ್ಮ ಮತ್ತು ಶ್ರೀನಿವಾಸ್ ವಿರುದ್ಧವೂ ಆರೋಪ ಮಾಡಲಾಗಿದೆ. ಪ್ರಮುಖವಾಗಿ ತಮ್ಮ ಸಾವಿಗೆ ಇವರೇ ಕಾರಣ ಎಂದು ಹಲವರನ್ನು ಹೆಸರಿಸಿರುವ ಅವರು, ಆ ಪೈಕಿ ಕಿರಣ್ ಎಂಬಾತನ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ.
ವಿಡಿಯೋದಲ್ಲೇನಿದೆ?
ಸಮಂದೂರ್ ಕಿರಣ್, ಗೋಕುಲ್ ಫ್ಯಾಷನ್ ಹರೀಶ, ಭಾಸ್ಕರ್, ನಾರಾಯಣಪ್ಪ, ದೊಡ್ಡಹಾಗಡೆ ಮಧುಗೌಡ, ಸರವಣ ಇವರೇ ನನ್ನ ಸಾವಿಗೆ ಕಾರಣ. ಯಾರನ್ನು ಬಿಟ್ಟರೂ ಕಿರಣ್ನನ್ನು ದಯವಿಟ್ಟು ಬಿಡಬೇಡಿ. ಕಿರಣ್ ಹಲವು ಹೆಣ್ಣು ಮಕ್ಕಳಿಗೆ ಫೋನ್ ಮಾಡಿ ಟಾರ್ಚರ್ ಕೊಡುತ್ತಿದ್ದಾನೆ. ಕಿರಣ್ಮಾಡಿರುವ ಇಂತಹ ಕೆಲಸಗಳೆಲ್ಲಾ ನನ್ನ ಮೇಲೆ ಬಂದಿವೆ. ಹಣದ ವಿಚಾರವಾಗಿ ಮಾತುಕತೆಗೆ ಕರೆಸಿಕೊಂಡು ಹಲ್ಲೆ ನಡೆಸಿದ್ದಾರೆ ಎಂದು ಪ್ರವೀಣ್ ಫೇಸ್ಬುಕ್ ವಿಡಿಯೋದಲ್ಲಿ ಆರೋಪಿಸಿದ್ದಾರೆ.