ಬೆಂಗಳೂರು : ಸರ್ಕಾರಿ ಶಾಲೆಯ ಮಕ್ಕಳು ಆರೋಗ್ಯವಾಗಿ ಸದೃಢವಾಗಿರಲು ಸರ್ಕಾರಿ ಶಾಲಾ ಮಕ್ಕಳಿಗೆ ವಾರದಲ್ಲಿ ಮೂರು ದಿನ ರಾಗಿ ಮಾಲ್ಟ್ ವಿತರಿಸುವ ಕಾರ್ಯಕ್ರಮಕ್ಕೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಚಾಲನೆ ನೀಡಿದರು.
ಗೋಲ್ಡ್‌ಮನ್ ಸ್ಯಾಕ್ಸ್ ಗುರಿ ಬೆಲೆ 50% ಕಡಿತ: Paytm ಷೇರುಗಳು 3% ಕ್ಕಿಂತ ಹೆಚ್ಚು ಕುಸಿತ
ವೇದಿಕೆ ಮೇಲೆ ಶಾಲಾ ಮಕ್ಕಳಿಗೆ ರಾಗಿ ಮಾಲ್ಟ್ ಕುಡಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಸಿಎಂ ಸಿದ್ದರಾಮಯ್ಯನವರು ವೇದಿಕೆ ಮೇಲೆ ಮಕ್ಕಳೊಂದಿಗೆ ನಗು ನಗುತ ಚರ್ಚೆ ಮಾಡುತ್ತಿದ್ದದ್ದು ಕಂಡು ಬಂತು. ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಿಗೆ ಉತ್ತರ ಪತ್ರಿಕೆಗಳನ್ನು ನೀಡದಷ್ಟು ಬರಗೆಟ್ಟು ಹೋದ ‘ದರಿದ್ರ ಸರ್ಕಾರ’ : ಆರ್.ಅಶೋಕ್ ಕಿಡಿ
ನಿತ್ಯ 60 ಲಕ್ಷದಂತೆ ವಾರಕ್ಕೆ 1.80 ಕೋಟಿ ಮಕ್ಕಳು ಈ ಯೋಜನೆಯ ಲಾಭ ಪಡೆಯಲಿದ್ದಾರೆ. ಮಕ್ಕಳಿಗೆ ಪೌಷ್ಟಿಕಾಂಶ ನೀಡುವ ನಿಟ್ಟಿನಲ್ಲಿ ಸರ್ಕಾರ ರಾಗಿ ಮಾಲ್ಟ್ ನೀಡುವ ನಿರ್ಧಾರ ಕೈಗೊಂಡಿದೆ. ಒಂದು ಎನ್ಜಿಒದವರು ಈ ಯೋಜನೆಯನ್ನು ಎರಡು ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಜಾರಿ ಮಾಡಿದ್ದರು. ಅದು ಯಶಸ್ವಿಯಾಗಿದೆ. ಹೀಗಾಗಿ ಇದನ್ನು ಜಾರಿ ಮಾಡಲು ಸರ್ಕಾರ ನಿರ್ಧಾರ ಮಾಡಿದೆ.
ಶಾಲಾ ಮಕ್ಕಳಿಗಾಗಿ ನಡೆಸುತ್ತಿರುವ ಮಾಧ್ಯಾಹ್ನದ ಊಟ ಯೋಜನೆ ಚೆನ್ನಾಗಿ ಸಾಗುತ್ತಿದೆ. ಮಕ್ಕಳಿಗೆ ಪೌಷ್ಟಿಕಾಹಾರ ನೀಡಲು ನಿರ್ಧಾರ ಮಾಡಲಾಗಿದೆ. ಹೀಗಾಗಿ ಮಧ್ಯಾಹ್ನದ ಬಿಸಿಯೂಟದ ಜೊತೆ ರಾಗಿ ಮಾಲ್ಟ್ ಕೊಡುವ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಂಡಿದೆ ಎಂದು ಹೇಳಲಾಗುತ್ತಿದೆ.