ಶಿವಮೊಗ್ಗ : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಾಗಿದೆ.ಈ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿರುವ ಡೀಲಕ್ಸ್ ಲಾಜಿಸ್ಟಿಕ್ ಕೊರಿಯರ್ ಗೋದಾಮಿನ ಮೇಲೆ ಪೊಲೀಸ್ ಅಧಿಕಾರಿಗಳು ಹಾಗೂ ಚುನಾವಣಾ ಅಧಿಕಾರಿಗಳು ದಾಳಿ ನಡೆಸಿ ಸೂಕ್ತ ದಾಖಲೆ ಇಲ್ಲದ ಸುಮಾರು 1.1 ಕೋಟಿ ಮೌಲ್ಯದ ಬಟ್ಟೆಗಳನ್ನು ವಶಕ್ಕೆ ಪಡೆಯಲಾಗಿದೆ.
ಮೆಟ್ರೋ ಹಳಿ ಮೇಲಿನ ಮೃತದೇಹ ಹೊರಕ್ಕೆ :ಮಾಗಡಿ ರಸ್ತೆಯಿಂದ ಚಲ್ಲಘಟ್ಟ ಮೆಟ್ರೋ ಸಂಚಾರ ಪುನಾರಂಭ
ಶಿವಮೊಗ್ಗ ನಗರದ ಕೋರಿಯರ್ ಗೋದಾಮಿನ ಮೇಲೆ ಚುನಾವಣಾ ಅಧಿಕಾರಿಗಳ ದಾಳಿ ನಡೆಸಿದ್ದು, ಸೂಕ್ತ ದಾಖಲೆ ಇಲ್ಲದ 1.1 ಕೋಟಿ ಮೌಲ್ಯದ ಬಟ್ಟೆಗಳು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.
ಶಿವಮೊಗ್ಗದ ಕೆಆರ್ ಪುರಂ ನಲ್ಲಿನ ಡೀಲಕ್ಸ್ ಲಾಜಿಸ್ಟಿಕ್ ಗೋದಾಮಿನ ಮೇಲೆ ಇದೀಗ ದೊಡ್ಡಪೇಟೆ ಪೊಲೀಸರು ಹಾಗೂ ಚುನಾವಣಾ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ. ದಾಳಿ ನಡೆಸಿದ ನಂತರ ಪೊಲೀಸರು ವಶಪಡಿಸಿಕೊಂಡ ವಸ್ತುಗಳನ್ನು ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳ ವಶಕ್ಕೆ ಒಪ್ಪಿಸಿದರು.