ಬೆಂಗಳೂರು : ಬೀದರ್ ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪೋಸ್ಟರ್ ಅಭಿಯಾನ ನಡೆಸಲಾಗುತ್ತಿದೆ.
ಬೆಂಗಳೂರಿನ ರೇಸ್ ಕೋರ್ಟ್ ಕೋರ್ಟ್ ನಲ್ಲಿ ವಿಧಾನಪರಿಷತ್ ಸದಸ್ಯ ರವಿಕುಮಾರ್ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಗುತ್ತಿಗೆದಾರ ಸಚಿನ್ ಸಾವಿಗೆ ಪ್ರಿಯಾಂಕ್ ಖರ್ಗೆ ಜವಾಬ್ದಾರಿ ಎಂದು ಪೋಸ್ಟರ್ ಅಭಿಮಾನ ನಡೆಸಲಾಗುತ್ತಿದ್ದು, ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೀದರ್ ನಲ್ಲಿ ಚಲಿಸುತ್ತಿದ್ದಂತ ರೈಲಿಗೆ ತಲೆಕೊಟ್ಟು ಗುತ್ತಿಗೆದಾರ ಸಚಿನ್ (26) ಎಂಬಾತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸುಮಾರು 7 ಪುಟಗಳ ಡೆತ್ ನೋಟ್ ಬರೆದಿಟ್ಟು ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಮಾಡಿಕೊಂಡಿರೋದಾಗಿ ತಿಳಿದು ಬಂದಿದೆ.
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ಸೇರಿ 6 ಜನರ ವಿರುದ್ಧ ಕಲಬುರಗಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಪ್ರಕರಣ ಸಂಬಂಧ ಕಲಬುರಗಿ ಸ್ಟೇಷನ್ ಬಜಾರ್ ಠಾಣೆ ಪೊಲೀಸರು ರಾಜು ಕಪನೂರ ಸೇರಿದಂತೆ 6 ಜನರ ವಿರುದ್ಧ ಎಫ್ಐಆರ್ ದಾಖಲಿಸಿದ್ದರು.