ಹಾಸನ : ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಕೆಎಸ್ಆರ್ಟಿಸಿ ಬಸ್ ಒಂದು ಶಾಲಾ ಕಾಂಪೌಂಡ್ ಹಾಗೂ ಮನೆ ಒಂದಕ್ಕೆ ಡಿಕ್ಕಿ ಹೊಡೆದ ಪರಿಣಾಮವಾಗಿ ಸ್ಥಳದಲ್ಲೇ ಓರ್ವ ವ್ಯಕ್ತಿ ಸಾವನಪ್ಪಿದ್ದು 10 ಜನರಿಗೆ ಗಂಭೀರವಾದಂತ ಗಾಯಗಳಾಗಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬಾಗೆ ಗ್ತಾಮದಲ್ಲಿ ನಡೆದಿದೆ.
ಶಾಲಾ ಕಾಂಪೌಂಡ್ ಮನೆಗೆ ಬಸ್ ಡಿಕ್ಕಿಯಾಗಿರುವ ಪರಿಣಾಮ ಸ್ಥಳದಲ್ಲೇ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಈ ಘಟನೆಯು ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿಗೆ ಬಾಗಿ ಗ್ರಾಮದಲ್ಲಿ ಈ ಘಟನೆ ಸಂಭವಿಸಿದ್ದು ಉದಯಪುರ ಗ್ರಾಮದ ಅಮೃತರಾಜ್ (34) ಎನ್ನುವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಈ ಘಟನೆಯಲ್ಲಿ ಹತ್ತಕ್ಕೂ ಹೆಚ್ಚು ಜನರಿಗೆ ಗಂಭಿರವಾದ ಗಾಯವಾಗಿವೆ.
ತಕ್ಷಣ ಗಾಯಾಳುಗಳನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಆದರೆ ಘಟನೆಯಲ್ಲಿ ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಕೆಎಸ್ಆರ್ಟಿಸಿ ಬಸ್ ಹೊರಟಿತ್ತು ಎಂದು ತಿಳಿದುಬಂದಿದ್ದು, ಸಕಲೇಶಪುರ ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.