ಬೆಂಗಳೂರು :ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ, ನಟ ದರ್ಶನ್ ಹಾಗು 7 ಆರೋಪಿಗಳಿಗೆ ಜಾಮೀನು ನೀಡಿದ್ದ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟಿಗೆ ಮೇಲ್ಮನವಿ ಸಲ್ಲಿಸಿತ್ತು. ಇದೀಗ ಇಂದು ಸುಪ್ರೀಂ ಕೋರ್ಟ್ ನಲ್ಲಿ ರಾಜ್ಯ ಸರ್ಕಾರ ಸಲ್ಲಿಸಿದ ಮೇಲ್ಮನವಿಯ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಸದ್ಯ ಆದೇಶವನ್ನು ಕಾಯ್ದಿರಿಸಿದೆ.
ದರ್ಶನ್ ಮತ್ತು ಗ್ಯಾಂಗ್ನಿಂದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸುಪ್ರೀಂಕೋರ್ಟ್ ನಲ್ಲಿ ಜಾಮೀನು ರದ್ದು ಕೋರಿದ ಅರ್ಜಿಯ ವಿಚಾರಣೆ ನಡೆಸಿದ್ದು, ನಟ ದರ್ಶನ್ ಪರವಾಗಿ ವಕೀಲ ಸಿದ್ಧಾರ್ಥ ದವೆ ವಾದ ಮಂಡಿಸಿದ್ದಾರೆ.
ದರ್ಶನ್ ಸೇರಿ 7 ಆರೋಪಿಗಳ ಜಾಮೀನು ರದ್ದು ಕೋರಿ ರಾಜ್ಯ ಸರ್ಕಾರ ಅರ್ಜಿ ಸಲ್ಲಿಸಿದೆ ಹೈಕೋರ್ಟ್ ಆದೇಶ ಪ್ರಶ್ನಿಸಿ ಸರ್ಕಾರ ಸುಪ್ರೀಂಕೋರ್ಟಿಗೆ ಮೇಲ್ಮನವಿ ಸಲ್ಲಿಸಿತ್ತು.. 2024 ಡಿಸೆಂಬರ್ ನಲ್ಲಿ ಹೈಕೋರ್ಟ್ ಆರೋಪಿಗಳಿಗೆ ಜಾಮೀನು ನೀಡಿತ್ತು. ಇದೀಗ ಸುಪ್ರೀಂಕೋರ್ಟ್ ಆದೇಶವನ್ನು ಕಾಯ್ದಿರಿಸಿದೆ.
ಡೆವಿಲ್ ಶೂಟಿಂಗ್ ನಲ್ಲಿ ಬ್ಯುಸಿ..!
ಸದ್ಯ ಥೈಲ್ಯಾಂಡ್ ನಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ನಡೆದಿದೆ. ನಟ ದರ್ಶನ್ ಕೂಡ ಜಾಲಿ ಮೂಡ್ ನಲ್ಲಿ ಎಂಜಾಯ್ ಮಾಡ್ತಿದ್ದಾರೆ. 1 ವಾರದಿಂದ ಡೆವಿಲ್ ಸಿನಿಮಾದ ಹಾಡುಗಳು ಹಾಗೂ ದೃಶ್ಯಗಳ ಚಿತ್ರೀಕರಣವನ್ನು ಮಾಡಲಾಗುತ್ತಿದೆ. ಕಳೆದ ವಾರ ಡೆವಿಲ್ ಮೋಷನ್ ಪೋಸ್ಟರ್ ದೊಡ್ಡ ರೀತಿಯಲ್ಲಿ ಸದ್ದು ಮಾಡಿತ್ತು. ಬಹುತೇಕ ವರ್ಷದ ಕೊನೆಯಲ್ಲಿ ಈ ಸಿನಿಮಾ ಬಿಡುಗಡೆ ಆಗುತ್ತೆ ಎನ್ನಲಾಗುತ್ತಿದೆ.