ಕೊಪ್ಪಳ : ಇಂದು ಕೊಪ್ಪಳದಲ್ಲಿ ಘೋರವಾದ ದುರಂತ ಸಂಭವಿಸಿದ್ದು, ಸ್ಟೀಲ್ ಫ್ಯಾಕ್ಟರಿಯಲ್ಲಿ ಕಾರ್ಬನ್ ಮೋನಾಕ್ಸೈಡ್ ಸೋರಿಕೆಯಾಗಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು 10 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೊಪ್ಪಳ ತಾಲೂಕಿನ ಅಲ್ಲಾಗ್ರಾಮದ ಬಳಿ ಇಸ್ಪಾಟ್ ಸ್ಟೀಲ್ ಫ್ಯಾಕ್ಟರಿಯಲ್ಲಿ ಈ ದುರಂತ ನಡೆದಿದೆ.
ಹೌದು ಕಾರ್ಬನ್ ಮೋನಾಕ್ಸೈಡ್ ಸೋರಿಕೆಯಾಗಿ 9 ಜನ ಅಸ್ವಸ್ಥರಾಗಿದ್ದು, ಹೊಸಪೇಟೆ ಬಳಿ ಇಸ್ಪಾಟ್ ಸ್ಟೀಲ್ ಫ್ಯಾಕ್ಟರಿಯಲ್ಲಿ ಈ ಒಂದು ಘಟನೆ ನಡೆದಿದೆ. ಇಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಈ ಒಂದು ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.ಓರ್ವ ಕಾರ್ಮಿಕ ಮೃತಪಟ್ಟು, ಹತ್ತಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ. ತಾಲೂಕಿನ ಅಲ್ಲಾನಗರ ಗ್ರಾಮದ ನಿವಾಸಿ ಮಾರುತಿ ಕೊರಗಲ್ (24) ಮೃತವ್ಯಕ್ತಿ ಎಂದು ಗುರುತಿಸಲಾಗಿದೆ. ಓರ್ವ ಕಾರ್ಮಿಕ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾನೆ ಎಂದು ತಿಳಿದುಬಂದಿದೆ.
ಕೊಪ್ಪಳ ತಾಲೂಕಿನ ಅಲ್ಲಾನಗರ ಗ್ರಾಮದ ಬಳಿಯ ಫ್ಯಾಕ್ಟರಿಯಲ್ಲಿ ಕಾರ್ಬನ್ ಮೋನಾಕ್ಸೈಡ್ ಸೋರಿಕೆಯಾಗಿ 10 ಜನ ಕಾರ್ಮಿಕರು ಅಸ್ವಸ್ಥಗೊಂಡಿದ್ದು, ಓರ್ವನ ಸ್ಥಿತಿ ಚಿಂತಾಜನಕವಾಗಿದೆ. 9 ಕಾರ್ಮಿಕರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 9 ಕಾರ್ಮಿಕರ ಪೈಕಿ ಓರ್ವ ಕಾರ್ಮಿಕರ ಸ್ಥಿತಿ ಚಿಂತಾಜನಕವಾಗಿದೆ.ಕಾರ್ಖಾನೆಯ ಒಂದು ಭಾಗವಾದ ಸಿಡಿ ಡಿಸ್ಚಾರ್ಜ್ ಎನ್ನುವ ಘಟಕ ಸುಮಾರು ದಿನಗಳಿಂದ ಕಾರ್ಯನಡೆಸದೆ ಸ್ಥಗಿತಗೊಂಡಿತ್ತು, ಅದನ್ನು ಸ್ವಚ್ಚಗೊಳಿಸಿ ಮತ್ತೆ ಕೆಲಸ ಆರಂಭಿಸಬೇಕೆಂದು ನಾಲ್ಕು ಜನ ಕಾರ್ಮಿಕರನ್ನು ಕಳುಹಿಸಲಾಗಿತ್ತು, ಸಿಡಿ ಡಿಸ್ಚಾರ್ಜ್ ಎಂಬ ಘಟಕದಲ್ಲಿ ಇಳಿದ ಕಾರ್ಮಿಕರಿಗೆ ಆಮ್ಲಜನಕದ ಕೊರತೆಯಾಗಿ ಅಲ್ಲೆ ಅಸ್ವಸ್ಥಗೊಂಡಿದ್ದಾರೆ.