ಬೆಂಗಳೂರು : ಬೆಂಗಳೂರಿನಲ್ಲಿ ಬಿಬಿಎಂಪಿ ಕಸದ ಲಾರಿಗೆ ಇದೀಗ ಮತ್ತೊಂದು ಜೀವ ಬಲಿಯಾಗಿದೆ. ಬಿಬಿಎಂಪಿ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿ ಚಲಿಸುತ್ತಿದ್ದ ಹತ್ತು ವರ್ಷದ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಥಣಿಸಂದ್ರದ ಬಳಿ ಈ ಒಂದು ಘಟನೆ ನಡೆದಿದೆ.
ಬಿಬಿಎಂಪಿ ಕಸದ ಲಾರಿ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದು ಬೈಕ್ ನಲ್ಲಿ ತೆರಳುತ್ತಿದ್ದ 10 ವರ್ಷದ ಐಮಾನ್ ಎಂಬ ಬಾಲಕ ಸ್ಥಳದಲ್ಲಿ ಸಾವನ್ನಪ್ಪಿದ್ದಾನೆ. ರೊಚ್ಚಿಗೆದ್ದ ಸಾರ್ವಜನಿಕರು, ಕಸ ಎಲ್ಲರಿಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದ್ದಾರೆ. ಬಿಬಿಎಂಪಿ ಕಸದ ಲಾರಿಗೆ ಬೆಂಕಿ ಹಚ್ಚುತ್ತಿದ್ದಂತೆ ಚಾಲಕ ಕೆಳಗಿಳಿದಿದ್ದಾನೆ. ಘಟನಾ ಸ್ಥಳಕ್ಕೆ ಆಗಮಿಸಿ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.ಹೆಣ್ಣೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಘಟನೆ ಕುರಿತು ಪ್ರಕರಣ ದಾಖಲಾಗಿದೆ.