ಹುಬ್ಬಳ್ಳಿ : ಗುತ್ತಿಗೆದಾರರ ನಿರ್ಲಕ್ಷ್ಯಕ್ಕೆ ಸರ್ಕಾರಿ ಅಧಿಕಾರಿಯೋರ್ವರು ಫ್ಲೈ ಓವರ್ ಕಾಮಗಾರಿಗೆ ಸಾವನ್ನಪ್ಪಿರುವಂತಹ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಸದ್ಯ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರು ಹುಬ್ಬಳ್ಳಿ ಪೊಲೀಸರು ಇದೀಗ ಮಹಾರಾಷ್ಟ್ರ ಮೂಲದ ಝಂಡು ಕನ್ಸ್ಟ್ರಕ್ಷನ್ ಎಂಬ ಕಂಪನಿಯ 11 ಜನ ನೌಕರರನ್ನು ಬಂಧಿಸಿದ್ದಾರೆ.
ಕಳೆದ ಮಂಗಳವಾರ ASI ನಾಭಿರಾಜ್ ಕರ್ತವ್ಯಕ್ಕೆ ಹೋಗುವಾಗ ಈ ವೇಳೆ ಕಾಮಗಾರಿಯ ರಾಡ್ ಬಿದ್ದು ತಲೆಗೆ ಗಂಭೀರವಾದಂತ ಗಾಯವಾಗಿತ್ತು. ಹುಬ್ಬಳ್ಳಿ ಉಪನಗರ ಠಾಣೆಯ ಎಎಸ್ಐ ನಾಭಿರಾಜ್ ದಯಣ್ಣವರ (59) ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಮೃತಪಟ್ಟಿದ್ದಾರೆ. ಘಟನೆ ಬಳಿಕ ಪ್ರಕರಣವನ್ನು ಗಂಭೀರವಾಗಿ ತಗೆದುಕೊಂಡಿರುವ ಹುಬ್ಬಳ್ಳಿ-ಧಾರವಾಡ ಪೊಲೀಸರು, ಇದೀಗ ಮಹಾರಾಷ್ಟ್ರ ಮೂಲದ ಝಂಡು ಕನ್ಸ್ಟ್ರಕ್ಷನ್ ಕಂಪನಿಯ 11 ಜನ ನೌಕರರನ್ನು ಬಂಧಿಸಿದ್ದಾರೆ.
ಝಂಡು ಕನ್ಸ್ಟ್ರಕ್ಷನ್ ಸೂಪರ್ ವೈಸರ್ ಹರ್ಷ ಹೊಸಗಾಣಿಗೇರ, ಲೈಸನಿಂಗ್ ಇಂಜಿನಿಯರ್ ಜಿತೇಂದ್ರ ಪಾಲ್, ಇಂಜನಿಯರ್ ಭೂಪೇಂದರ್, ನೌಕರರಾದ ಮಹಮ್ಮದ್ ಮಿಯಾ, ಅಸ್ಲಂ, ಮೊಹಮ್ಮದ್ ಹಾಜಿ, ಸಬೀಬ್, ರಿಜಾವುಲ್, ಶಮೀಮ್ ಅಲಿಯಾಸ್ ಪಿಂಟು ಶೇಕ್, ಮೊಹಮ್ಮದ್ ಆರೀಫ್ ಹಾಗೂ ಕಾರ್ಮಿಕ ಗುತ್ತಿಗೆದಾರ ಮೊಹಮ್ಮದ್ ರಬಿವುಲ್ ಹಕ್ ಬಂಧಿತರು.
ಘಟನೆ ಹಿನ್ನೆಲೆ?
ಕಳೆದ ಮಂಗಳವಾರ ಸಂಜೆ ನಾಲ್ಕು ಗಂಟೆಗೆ ಕೆಲಸಕ್ಕೆ ಹೋಗುವ ಸಮಯದಲ್ಲಿ ಹುಬ್ಬಳ್ಳಿಯ ಕೋರ್ಟ್ ವೃತ್ತದ ಬಳಿ ಫ್ಲೈ ಓವರ್ ಕಾಮಗಾರಿಯ ರಾಡ್ ನಾಭಿರಾಜ್ ದಯಣ್ಣವರ ತಲೆ ಮೇಲೆ ಬಿದ್ದಿತ್ತು. ಹೆಲ್ಮೆಟ್ ಹಾಕಿದ್ದರೂ ಹೆಲ್ಮೆಟ್ ಸೀಳಿ ನಾಭಿರಾಜ್ ತಲೆಗೆ ಗಂಭೀರ ಗಾಯವಾಗಿತ್ತು.ಕೂಡಲೇ ನಾಭಿರಾಜ್ರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅಂದು ರಾತ್ರಿ ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ನಾಭಿರಾಜ್ರನ್ನ ಶಿಫ್ಟ್ ಮಾಡಲಾಗಿತ್ತು. ಆದರೆ ನಿನ್ನೆ ಬೆಳಗಿನ ಜಾವ 3.45 ಕ್ಕೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.