ಬೆಂಗಳೂರು : ರಾಜ್ಯದಲ್ಲಿ ಕೊರೊನ ರೂಪಾಂತರೀಯ ಎರಡನೇ ಹೊಸ ತಳಿ ಎಂಟ್ರಿ ಆಗಿದ್ದು, ಇಂದು ರಾಜ್ಯದಲ್ಲಿ 114 ಹೊಸ ಪ್ರಕರಣಗಳು ದಾಖಲಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಈ ಕುರಿತು ಮಾಹಿತಿ ನೀಡಿದೆ.
ರಾಜ್ಯದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ 3ಕ್ಕೆ ಏರಿಕೆಯಾಗಿದ್ದು, ಇಂದು ರಾಜ್ಯದಲ್ಲಿ 114 ಹೊಸ ಕೊರೋನಾ ಪ್ರಕರಣಗಳು ದಾಖಲಾಗಿವೆ. ರಾಜ್ಯದಲ್ಲಿ ಕರೋನ ಸಕ್ರಿಯ ಪ್ರಕರಣಗಳ ಸಂಖ್ಯೆ 234 ಇವೆ. ಇದುವರೆಗೂ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 367 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.