ಬೆಂಗಳೂರು: ಬೆಂಗಳೂರಿನಲ್ಲಿ ಸಂಚಾರಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಶಾಲಾ ವಾಹನ ಚಾಲಕರ ಡ್ರಂಕ್ & ಡ್ರೈವ್ ಕೇಸ್ ಗೆ ಸಂಬಂಧಿಸಿದಂತೆ 10 ತಿಂಗಳಲ್ಲಿ 118 ಚಾಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಬೆಂಗಳೂರಿನಲ್ಲಿ ಕಳೆದ 10 ತಿಂಗಳಲ್ಲಿ ಕುಡಿದು ಶಾಲಾ ವಾಹನ ಚಾಲನೆ ಮಾಡಿದ 118 ಚಾಲಕರ ವಿರುದ್ಧ ಕೇಸ್ ದಾಖಲಾಗಿದೆ. 118 ಚಾಲಕರ ಲೈಸೆನ್ಸ್ ಕೂಡ ರದ್ದುಪಡಿಸಲಾಗಿದೆ. ಕುಡಿದ ಮತ್ತಿನಲ್ಲಿ ಶಾಲಾ ವಾಹನ ಚಲಾಯಿಸುವ ಮೂಲಕ ಸಂಚಾರಿ ನಿಯಮ ಉಲ್ಲಂಘಿಸುತ್ತಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ಶಾಲಾ ವಾಹನ ಚಾಲಕರ ಡ್ರೈವಿಂಗ್ ಲೈಸನ್ಸ್ ಸಸ್ಪೆಂಡ್ ಮಾಡಲಾಗಿದೆ.
ಬೆಂಗಳೂರಿನಲ್ಲಿ ಈ ವರ್ಷದ ಜನವರಿಯಲ್ಲಿ 16 ಡ್ರಂಕ್ & ಡ್ರೈವ್ ಪ್ರಕರಣಗಳು ದಾಖಲಾಗಿದ್ದರೆ, ಪೆಬ್ರವರಿಯಲ್ಲಿ 7, ಜುಲೈ ನಲ್ಲಿ 23, ಆಗಸ್ಟ್ ನಲ್ಲಿ 26, ಸೆಪ್ಟೆಂಬರ್ ನಲ್ಲಿ 22, ನವೆಂಬರ್ ನಲ್ಲಿ 24 ಪ್ರಕರಣಗಳು ದಾಖಲಾಗಿವೆ. ಈ ಬಗ್ಗೆ ಶಾಲಾ ಆಡಳಿತ ಮಂಡಳಿಗಳಿಗೆ ಸಂಚಾರಿ ಪೊಲೀಸರು ನೋಟಿಸ್ ನೀಡಿದ್ದಾರೆ.