ಕಲಬುರ್ಗಿ : ಕಲ್ಬುರ್ಗಿಯಲ್ಲಿ ಭೀಕರವಾದ ಕೊಲೆಯಾಗಿದ್ದು ಸ್ನೇಹಿತರು ಸೇರಿ ಇನ್ನೊಬ್ಬ ಸ್ನೇಹಿತನನ್ನು ಭೀಕರವಾಗಿ ಕೊಲೆ ಮಾಡಿದ್ದಾರೆ. ಕೊಲೆಯ ಭೀಕರತೆ ಯಾವ ರೀತಿ ಇತ್ತು ಎಂದರೆ, 12 ಬಾರಿ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಸ್ನೇಹಿತನನ್ನು ಭೀಕರವಾಗಿ ಕೊಲೆ ಮಾಡಲಾಗಿದೆ.
ಹೌದು ಕಲಬುರ್ಗಿಯಲ್ಲಿ ಸ್ನೇಹಿತನನ್ನೇ ಹತ್ಯೆಗೈದ ಫ್ರೆಂಡ್ಸ್. ಕಲ್ಲು ಎತ್ತು ಹಾಕಿ ಭೀಕರವಾಗಿ ಕೊಲೆ ಮಾಡಿದ್ದಾರೆ. ಸುಮಾರು 12 ಬಾರಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಭೀಕರವಾಗಿ ಕೊಲೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಕೊಲೆಯಾದ ಯುವಕನನ್ನು ರೇವಣಸಿದ್ದಪ್ಪ ಎಂದು ತಿಳಿದುಬಂದಿದ್ದು ಮನೆಯಲ್ಲಿದ್ದ ಈತನನ್ನು ಫೋನ್ ಮಾಡಿ ಮನೆಯಿಂದ ಹೊರಗಡೆ ಕರೆಸಿಕೊಂಡಿದ್ದಾರೆ.
ಬಳಿಕ ಬೈಕ್ ನಲ್ಲಿ ಸ್ನೇಹಿತ ರೇವನಸಿದ್ದಪ್ಪನನ್ನು ಕರೆತಂದು ನಡು ರಸ್ತೆಯ ಮೇಲೇನೆ 12 ಬಾರಿ ಕಲ್ಲು ಎತ್ತಿ ಹಾಕಿ ಭೀಕರವಾಗಿ ಕೊಲೆ ಮಾಡಿದ್ದಾರೆ. ಸಿಸಿ ಕ್ಯಾಮೆರಾದಲ್ಲಿ ಕೊಲೆಯ ಭಯಾನಕ ದೃಶ್ಯ ಸೆರೆಯಾಗಿದೆ. ಸದ್ಯ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಯಾವ ಕಾರಣಕ್ಕಾಗಿ ಕೊಲೆ ಮಾಡಲಾಗಿದೆ ಎಂಬುವುದರ ಕುರಿತು ತನಿಖೆ ಕೈಗೊಂಡಿದ್ದಾರೆ.