ಕಲಬುರ್ಗಿ : ಮುಂದಿನ 6-7ತಿಂಗಳಲ್ಲಿ 1,200 ಪಿಎಸ್ಐ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುತ್ತೇವೆ. ರಾಜ್ಯದಲ್ಲಿ 10 ರಿಂದ 12 ಸಾವಿರ ಪೋಲಿಸ್ ಸಿಬ್ಬಂದಿಗಳ ಕೊರತೆ ಇದೆ. ಅದನ್ನು ಕೂಡ ಭರ್ತಿ ಮಾಡಿಕೊಳ್ಳುವ ಕೆಲಸ ಮಾಡುತ್ತಿದ್ದೇವೆ ಎಂದು ಕಲಬುರ್ಗಿಯಲ್ಲಿ ಗೃಹ ಸಚಿವ ಜಿ ಪರಮೇಶ್ವರ್ ಹೇಳಿಕೆ ನೀಡಿದರು.
ಇಂದು ಕಲಬುರ್ಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಕಾನೂನು ಸುವ್ಯವಸ್ಥೆ ಹಾಳಾಗಿದೆ ಅಂತಾರೆ. ಅಂತಹ ಒಂದು ಉದಾಹರಣೆ ಕೊಡಿ? ಸುಮ್ಮನೆ ಜನರಲ್ ಆಗಿ ಆರೋಪಗಳನ್ನು ಮಾಡಬಾರದು. ಅವರ ಕಾಲದಲ್ಲಿ ಎಷ್ಟು ಆಗಿದೆ ಎಂಬುವುದರ ಬಗ್ಗೆ ದಾಖಲೆ ಇದೆ. ಅದನ್ನು ಸಮಯ ಬಂದಾಗ ನಾವು ಬಿಡುಗಡೆ ಮಾಡುತ್ತೇವೆ ಎಂದು ಅವರು ತಿಳಿಸಿದರು.
ಇನ್ನು ಮಂಗಳೂರು ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, 48 ಗಂಟೆಯಲ್ಲಿ ಮಂಗಳೂರು ದರೋಡೆ ಕೇಸ್ ಬೇಧಿಸಿದ್ದೇವೆ. ಬೀದರ್ ದರೋಡೆ ಕೇಸ್ ಕೂಡ ಕೊನೆಯ ಹಂತದಲ್ಲಿದೆ. ಆದಷ್ಟು ಬೇಗ ನಮ್ಮ ಪೊಲೀಸರು ಅವರನ್ನು ಕೂಡ ಅರೆಸ್ಟ್ ಮಾಡುತ್ತಾರೆ ಎಂದು ಕಲಬುರ್ಗಿಯಲ್ಲಿ ಗೃಹ ಸಚಿವ ಜಿ ಪರಮೇಶ್ವರ್ ಹೇಳಿಕೆ ನೀಡಿದರು.