ಗುಜರಾತ್ : 13 ವರ್ಷದ ವಿದ್ಯಾರ್ಥಿಯೊಂದಿಗೆ ಓಡಿ ಹೋಗಿ, ಆತನಿಂದಲೇ ಗರ್ಭಿಣಿಯಾಗಿ ಸದ್ಯ ಪೋಕ್ಸೊ ಕಾಯ್ದೆಯಡಿ ಬಂಧನದಲ್ಲಿರುವ 23 ವರ್ಷದ ಶಿಕ್ಷಕಿಯ ಗರ್ಭಪಾತಕ್ಕೆ ಗುಜರಾತ್‌ನ ಸೂರತ್‌ನ ವಿಶೇಷ ಪೋಕ್ಸೋ ನ್ಯಾಯಾಲಯ ಅನುಮತಿ ನೀಡಿದೆ. ಅಪ್ರಾಪ್ತ ವಯಸ್ಕನನ್ನು ಅಪಹರಿಸಿದ ಕೇಸ್‌ನಲ್ಲಿ ಶಿಕ್ಷಕಿ ವಿರುದ್ಧ ಪೋಕ್ಸೊ ಕಾಯ್ದೆಯಡಿ ದೂರು ದಾಖಲಾಗಿದ್ದು, ಸದ್ಯ ಸೂರತ್‌ನ ಜೈಲಿನಲ್ಲಿದ್ದಾಳೆ.
ಹೌದು ಇಡಿ ದೇಶವೇ ಬೆಚ್ಚಿ ಬೀಳಿಸೋ ಪ್ರಕರಣ ಇದಾಗಿದ್ದು, ಕೆಲವು ದಿನಗಳ ಹಿಂದೆ ಬೆಳಕಿಗೆ ಬಂದ ಈ ಪ್ರಕರಣ ದೇಶಾದ್ಯಂತ ಸಂಚಲನ ಸೃಷ್ಟಿಸಿತ್ತು. ಆಕೆಯ ಮಾನಸಿಕ ತೊಂದರೆಗಳನ್ನು ಗಣನೆಗೆ ತೆಗೆದುಕೊಂಡು ಈ ತೀರ್ಪು ನೀಡಲಾಗಿದೆ ಎಂದು ನ್ಯಾಯಾಲಯ ತಿಳಿಸಿದೆ.
ಬಾಲಕ ನಾಪತ್ತೆಯಾದ ಬಳಿಕ ಈ ಬಗ್ಗೆ ಆತನ ತಂದೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಸೂರತ್ ನಗರದ ಪುಣೆ ಠಾಣೆಯ ಪೊಲೀಸರು ಇವರನ್ನು ದೂರು ದಾಖಲಾದ 6 ದಿನಗಳ ಬಳಿಕ ಗುಜರಾತ್-ರಾಜಸ್ಥಾನ ಗಡಿಯಲ್ಲಿ ಪತ್ತೆ ಹಚ್ಚಿದ್ದರು. ಈ ವೇಳೆ ಶಿಕ್ಷಕಿ 20 ವಾರಗಳ ಗರ್ಭಿಣಿಯಾಗಿದ್ದಳು.
ಏನಿದು ಪ್ರಕರಣ?
ಗುಜರಾತಿನ ಸೂರತ್ನಲ್ಲಿರುವ ಖಾಸಗಿ ಶಾಲೆಯ ಶಿಕ್ಷಕಿಯಾಗಿದ್ದ ಶಿಕ್ಷಕಿ ಕಳೆದ ಮೂರು ವರ್ಷಗಳಿಂದ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡುತ್ತಿದ್ದರು. ಆದರೆ ಕಳೆದ ಒಂದು ವರ್ಷದಿಂದ ಈ ವಿದ್ಯಾರ್ಥಿ ಜೊತೆಗೆ ಶಿಕ್ಷಕಿ ಸಾಕಷ್ಟು ಆತ್ಮೀಯತೆ ಬೆಳೆಸಿದ್ದಳು. ಕಾಲಾನಂತರದಲ್ಲಿ ಇಬ್ಬರು ಸಾಕಷ್ಟು ಆತ್ಮೀಯತೆ ಬೆಳೆಸಿಕೊಂಡಿದ್ದರು. ಆದರೆ ಕಳೆದ ಏಪ್ರಿಲ್ 25ರ ಮಧ್ಯಾಹ್ನ ವಿದ್ಯಾರ್ಥಿ ಕಾಣೆಯಾಗಿದ್ದು, ಸಿಸಿಟಿವಿ ಪರಿಶೀಲಿಸಿದಾಗ ಶಿಕ್ಷಕಿ ಬಾಲಕನೊಂದಿಗೆ ಬ್ಯಾಗುಗಳನ್ನು ಹೊತ್ತೊಯ್ಯುತ್ತಿರುವುದು ಪತ್ತೆಯಾಗಿದೆ. ಇದರಿಂದ ಇದು ಪೂರ್ವ ನಿಯೋಜಿತ ಕೃತ್ಯವೆಂಬುದು ಬಯಲಾಗಿದೆ.
ವಿದ್ಯಾರ್ಥಿ ಕಾಣೆಯಾದ ಕುರಿತು ಬಾಲಕನ ಪೋಷಕರು ಪೊಲೀಸರಿಗೆ ದೂರು ನೀಡಿದ್ದು. ದೂರನ್ನು ದಾಖಲಿಸಿಕೊಂಡಿದ್ದ ಪೊಲೀಸರು ಇಬ್ಬರಿಗಾಗಿ ತೀವ್ರ ಹುಡುಕಾಟ ಆರಂಭಿಸಿದ್ದರು. ನಾಲ್ಕು ದಿನಗಳ ಹುಡುಕಾಟದ ನಂತರ ಇಬ್ಬರು ಗುಜರಾತ್-ರಾಜಸ್ಥಾನ ಗಡಿಯ ಬಳಿ ಪತ್ತೆಯಾಗಿದ್ದು. ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಶಿಕ್ಷಕಿ ಮತ್ತು ವಿದ್ಯಾರ್ಥಿ ಇಬ್ಬರು ವಡೋದರಾ, ಅಹಮದಾಬಾದ್, ದೆಹಲಿ, ಜೈಪುರ ಮತ್ತು ವೃಂದಾವನ ಸೇರಿದಂತೆ ಹಲವಾರು ನಗರಗಳಲ್ಲಿ ಪ್ರಯಾಣಿಸಿದ್ದರು ಎಂಬುದು ಪೊಲೀಸ್ ತನಿಖೆಯಲ್ಲಿ ಬಹಿರಂಗವಾಗಿದ್ದು. ಶಿಕ್ಷಕಿಯ ಮತ್ತು ಬಾಲಕನ ನಡುವೆ ವಡೋದರದ ಹೋಟೆಲ್ ಮತ್ತು ಮನೆಯಲ್ಲಿ ಲೈಂಗಿಕ ಸಂಪರ್ಕ ಏರ್ಪಟ್ಟಿರುವುದು ಬಹಿರಂಗವಾಗಿದೆ.
ಇನ್ನು ಶಿಕ್ಷಕಿ 5 ತಿಂಗಳ ಗರ್ಭಿಣಿ ಎಂಬುದು ವೈದ್ಯಕೀಯ ಪರೀಕ್ಷೆಯಲ್ಲಿ ಬಹಿರಂಗವಾಗಿದ್ದು. ಈ ಕುರಿತು ಸೂರತ್ ಪೊಲೀಸ್ ಉಪ ಆಯುಕ್ತ ಭಾಗೀರಥ್ ಗಧ್ವಿ ಖಾಸಗಿ ಪತ್ರಿಕೆಗೆ ಪ್ರತಿಕ್ರಿಯೆ ನೀಡಿದ್ದಾರೆ. “ವೈದ್ಯಕೀಯ ಪರೀಕ್ಷೆಯಲ್ಲಿ ಮಹಿಳೆ ಐದು ತಿಂಗಳ ಗರ್ಭಿಣಿ ಎಂದು ತಿಳಿದುಬಂದಿದೆ. ಅಪ್ರಾಪ್ತ ವಯಸ್ಕ ಮಗುವಿನ ತಂದೆ ಎಂದು ಅವರು ಹೇಳಿಕೊಂಡಿದ್ದಾರೆ. ಅವರ ಹೇಳಿಕೆಯ ಆಧಾರದ ಮೇಲೆ, ನಾವು ಡಿಎನ್‌ಎ ಪರೀಕ್ಷೆಗೆ ಆದೇಶಿಸಿದ್ದೇವೆ. ವಿಚಾರಣೆಯ ಸಮಯದಲ್ಲಿ, ಇಬ್ಬರೂ ವ್ಯಕ್ತಿಗಳು ಹಲವಾರು ತಿಂಗಳುಗಳಿಂದ ದೈಹಿಕ ಸಂಬಂಧದಲ್ಲಿ ತೊಡಗಿದ್ದಾಗಿ ಒಪ್ಪಿಕೊಂಡಿದ್ದಾರೆ” ಎಂದು ಹೇಳಿದರು.
#Gujarat : Female tutor abducts minor boy, becomes pregnant; gets court nod for abortionhttps://t.co/RFToVo1GND@santwana99 @jayanthjacob
— Dilip Kshatriya (@Kshatriyadilip) May 14, 2025